ದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಅವರು 100 ಕೋಟಿ ರೂಪಾಯಿ ಕಿಕ್ಬ್ಯಾಕ್ಗೆ ಬೇಡಿಕೆ ಇಟ್ಟಿರುವ ಕುರಿತು ಸಾಕ್ಷ್ಯ ಇದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹೇಳಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ (Money Laundering Case) ಆರೋಪದ ಮೇಲೆ ಸಲ್ಲಿಸಲಾದ ಚಾರ್ಜ್ ಶೀಟ್ ನ್ನು ನ್ಯಾಯಾಲಯ ಪರಿಗಣಿಸಿದೆ ಎನ್ನಲಾಗಿದೆ. ಈ ವೇಳೆ ಕೋರ್ಟ್ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಿದೆ.
ಅರವಿಂದ್ ಕೇಜ್ರಿವಾಲ್ 100 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಿಬಿಐ ತನಿಖೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಬಂಧನಕ್ಕೂ ಮುನ್ನವೇ ಸಾಕ್ಷ್ಯವನ್ನು ಸಂಗ್ರಹಿಸಿದ್ದೇವೆ” ಎಂದು ಎಎಸ್ ಜಿ ರಾಜು ಹೇಳಿದ್ದಾರೆ.
ಪಿಎಂಎಲ್ಎ ಅಡಿಯಲ್ಲಿ ಸಲ್ಲಿಸಲಾದ ಯಾವುದೇ ಚಾರ್ಜ್ ಶೀಟ್ ನಲ್ಲಿ ಅರವಿಂದ್ ಕೇಜ್ರಿವಾಲ್ ಹೆಸರಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಪರ ವಕೀಲರು ಹೇಳಿದರು.