ನವದೆಹಲಿ: ಅಬಕಾರಿ ನೀತಿ (excise policy) ಹಗರಣದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ (money laundering case)ಗೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 3ರ ವರೆಗೆ ವಿಸ್ತರಿಸಲಾಗಿದೆ.
ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ವರ್ಚುವಲ್ ಆಗಿ ಹಾಜರುಪಡಿಸಿದ ನಂತರ ಬಂಧನವನ್ನು ವಿಸ್ತರಿಸಲಾಯಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ವಿಸ್ತರಿಸಿದರು.
ಜಾರಿ ನಿರ್ದೇಶನಾಲಯದ (ಇಡಿ) ಅರ್ಜಿಯನ್ನು ವಿರೋಧಿಸಿದ ಕೇಜ್ರಿವಾಲ್ ಪರ ವಕೀಲರು, ಕಸ್ಟಡಿ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ವಾದಿಸಿದರು. ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಕೇಜ್ರಿವಾಲ್ ರನ್ನು ಬಂಧಿಸಿದೆ. ಮೇ 10 ರಂದು ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.
ಆದರೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಕೇಜ್ರಿವಾಲ್‌ಗೆ ಮೇ 10 ರಂದು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಮತ್ತೆ ಶರಣಾಗುವಂತೆ ಸೂಚಿಸಿತ್ತು. ಹೀಗಾಗಿ ಅವರು ಮತ್ತೆ ಶರಣಾಗಿದ್ದರು.