ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಧಿಕಾರದ ದುರಹಂಕಾರದಿಂದ ಮೋದಿ ಮೂರು ಬಾರಿ ಚುನಾಯಿತ ಮುಖ್ಯಮಂತ್ರಿಯನ್ನು ಬಂಧಿಸಿ ಎಲ್ಲರನ್ನೂ ತುಳಿಯಲು ಪ್ರಯತ್ನಿಸುತ್ತಿದ್ದಾರೆ. ಇದು ದೆಹಲಿ ಜನತೆಗೆ ಮಾಡಿದ ದ್ರೋಹ. ನಿಮ್ಮ ಮುಖ್ಯಮಂತ್ರಿ ಸದಾ ನಿಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಜೈಲಿನ ಒಳಗಿರಲಿ, ಹೊರಗಿರಲಿ ಅವರ ಜೀವನ ದೇಶಕ್ಕೆ ಮುಡಿಪಾಗಿದೆ. ಅವರು ಜನರಿಗಾಗಿ, ಜನರಿಗೋಸ್ಕರ ಇದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಜೈ ಹಿಂದ್ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಡಿ ವಿಚಾರಣೆಗೆ ಹಾಜರಾಗುವಂತೆ ಜಾರಿಗೊಳಿಸಿದ್ದ 9 ಸಮನ್ಸ್ಗೆ ಕೇಜ್ರಿವಾಲ್ ಗೈರಾಗಿದ್ದರು. ಹೈಕೋರ್ಟ್ನಲ್ಲೂ ಇಡಿ ವಿಚಾರಣೆಯನ್ನು ಮುಂದೂಡವಂತೆ ಕೇಜ್ರಿವಾಲ್ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹೈಕೋರ್ಟ್ ವಾದವನ್ನು ಪುರಸ್ಕರಿಸದೇ ಕೇಜ್ರಿವಾಲ್ಗೆ ರಕ್ಷಣೆ ನೀಡಲು ನಿರಾಕರಿಸಿತು. ಸದ್ಯ ಇದರ ಬೆನ್ನಲ್ಲಿಯೇ ಇಡಿ ಬಂಧಿಸಿದೆ.