ಮಾಜಿ ಪ್ರಧಾನಿ ದೇವೇಗೌಡರನ್ನ BJP ಸರ್ಕಾರ ಕಾಟಾಚಾರಕ್ಕೆ ಕರೆದಿದೆ – JDS ನಿಂದ ಸರಣಿ ಟ್ವೀಟ್…
ಬೆಂಗಳೂರಿನಲ್ಲಿ ಉದ್ಘಾಟಿಸಲಾಗಿರುವ 108 ಅಡಿ ಎತ್ತರದ ಕಂಚಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣದ ನಂತರ ರಾಜಕೀಯದ ಕೆಸರೆರೆಚಾಟ ಮುಂದುವರೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜಕೀಯ ಜಟಪಟಿಗೆ ಕಾರಣವಾಗಿದೆ.
ಮಾಜಿ ಪ್ರಧಾನಿ ದೇವೇಗೌಡರನ್ನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್ ಆರೋಪ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ದೇವೇಗೌಡರಿಗೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಲಾಗಿತ್ತು ಮತ್ತು ಖುದ್ದು ಸಿಎಂ ಕರೆ ಮಾಡಿದ್ದರು ಎಂದು ಬಿಜೆಪಿ ತಿರುಗೇಟು ನೀಡಿತ್ತು, ಇದರಿಂದ ಗಲಬಿಲಿಗೊಂಡ ಜೆಡಿಎಸ್ ಕೆರದಿದ್ದು ನಿಜ ಸರಿಯಾದ ರೀತಿಯಲ್ಲಿ ಕೆರದಿಲ್ಲ. ಇದೇನಾ ಬಿಜೆಪಿ ಸಂಸ್ಕಾರ ಎಂದು ಮತ್ತೊಂದು ದಾಳ ಉರುಳಿಸಿದೆ.
ಈ ಕುರಿತು ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.
ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ಹೆಚ್ ಡಿ ದೇವೆಗೌಡರನ್ನ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.
ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?
ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ?
ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?
ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ
ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ.
ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು.
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.
ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?
ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ. ಎಂದು ಜೆಡಿಎಸ್ ಸರಣಿ ಸ್ವೀಟ್ ಮಡಿ ಬಿಜೆಪಿ ಸರ್ಕಾರವನ್ನ ಟೀಕಿಸಿದೆ.
Kempegowda Statue: Former Prime Minister DeveGowda – BJP government – a series of tweets from JDS…








