ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kempegowda Statue: ಮಾಜಿ ಪ್ರಧಾನಿ ದೇವೇಗೌಡರನ್ನ BJP ಸರ್ಕಾರ ಕಾಟಾಚಾರಕ್ಕೆ ಕರೆದಿದೆ –  JDS ನಿಂದ ಸರಣಿ ಟ್ವೀಟ್… 

ಬೆಂಗಳೂರಿನಲ್ಲಿ ಉದ್ಘಾಟಿಸಲಾಗಿರುವ 108 ಅಡಿ ಎತ್ತರದ ಕಂಚಿನ  ನಾಡಪ್ರಭು ಕೆಂಪೇಗೌಡರ ಪ್ರತಿಮೆ  ಅನಾವರಣದ ನಂತರ ರಾಜಕೀಯದ ಕೆಸರೆರೆಚಾಟ  ಮುಂದುವರೆದಿದೆ.   ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್  ನಡುವೆ ರಾಜಕೀಯ  ಜಟಪಟಿಗೆ ಕಾರಣವಾಗಿದೆ.   

Naveen Kumar B C by Naveen Kumar B C
November 12, 2022
in Newsbeat, Politics, ರಾಜಕೀಯ
H D devegowda
Share on FacebookShare on TwitterShare on WhatsappShare on Telegram

ಮಾಜಿ ಪ್ರಧಾನಿ ದೇವೇಗೌಡರನ್ನ BJP ಸರ್ಕಾರ ಕಾಟಾಚಾರಕ್ಕೆ ಕರೆದಿದೆ –  JDS ನಿಂದ ಸರಣಿ ಟ್ವೀಟ್…

ಬೆಂಗಳೂರಿನಲ್ಲಿ ಉದ್ಘಾಟಿಸಲಾಗಿರುವ 108 ಅಡಿ ಎತ್ತರದ ಕಂಚಿನ  ನಾಡಪ್ರಭು ಕೆಂಪೇಗೌಡರ ಪ್ರತಿಮೆ  ಅನಾವರಣದ ನಂತರ ರಾಜಕೀಯದ ಕೆಸರೆರೆಚಾಟ  ಮುಂದುವರೆದಿದೆ.   ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್  ನಡುವೆ ರಾಜಕೀಯ  ಜಟಪಟಿಗೆ ಕಾರಣವಾಗಿದೆ.

ಮಾಜಿ ಪ್ರಧಾನಿ ದೇವೇಗೌಡರನ್ನ   ಉದ್ಘಾಟನಾ ಕಾರ್ಯಕ್ರಮಕ್ಕೆ   ಆಹ್ವಾನಿಸಿಲ್ಲ  ಎಂದು  ಜೆಡಿಎಸ್ ಆರೋಪ ಮಾಡಿತ್ತು.   ಇದಕ್ಕೆ ಪ್ರತ್ಯುತ್ತರವಾಗಿ  ಬಿಜೆಪಿ  ದೇವೇಗೌಡರಿಗೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಲಾಗಿತ್ತು ಮತ್ತು ಖುದ್ದು ಸಿಎಂ ಕರೆ   ಮಾಡಿದ್ದರು ಎಂದು ಬಿಜೆಪಿ ತಿರುಗೇಟು ನೀಡಿತ್ತು, ಇದರಿಂದ  ಗಲಬಿಲಿಗೊಂಡ ಜೆಡಿಎಸ್   ಕೆರದಿದ್ದು ನಿಜ ಸರಿಯಾದ ರೀತಿಯಲ್ಲಿ ಕೆರದಿಲ್ಲ. ಇದೇನಾ  ಬಿಜೆಪಿ ಸಂಸ್ಕಾರ ಎಂದು ಮತ್ತೊಂದು ದಾಳ ಉರುಳಿಸಿದೆ.

Related posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

July 9, 2026
ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

July 9, 2026

ಈ ಕುರಿತು  ಜೆಡಿಎಸ್ ಸರಣಿ ಟ್ವೀಟ್ ಮಾಡಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ಹೆಚ್ ಡಿ ದೇವೆಗೌಡರನ್ನ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ  ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು,  ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ?

ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು.

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?

ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ. ಎಂದು ಜೆಡಿಎಸ್ ಸರಣಿ  ಸ್ವೀಟ್  ಮಡಿ ಬಿಜೆಪಿ ಸರ್ಕಾರವನ್ನ ಟೀಕಿಸಿದೆ.

Kempegowda Statue: Former Prime Minister DeveGowda  – BJP government – a series of tweets from JDS…

Tags: Kempegowda Statue
ShareTweetSendShare
Join us on:

Related Posts

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಇನ್ನು ಮುಂದೆ ಪಿಎಫ್ ಹಣ ಪಡೆಯುವುದು ನೀರು ಕುಡಿದಷ್ಟೇ ಸುಲಭ -34 ಕೋಟಿ ಉದ್ಯೋಗಿಗಳ ಖಾತೆಗೆ ಬೀಳಲಿದೆ ಬಡ್ಡಿ ಹಣ : ಕೋಟ್ಯಂತರ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

by Shwetha
July 9, 2026
0

ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ನಿರೀಕ್ಷೆಯ ನಂತರ ಜುಲೈ 15 ರಂದು ಸುಮಾರು 34...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

E20ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ: ನಿತಿನ್ ಗಡ್ಕರಿ

by Shwetha
July 9, 2026
0

ನಿತಿನ್ ಗಡ್ಕರಿ ಅವರು, E20 ಪೆಟ್ರೋಲ್‌ನಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪಗಳನ್ನು ತಿರಸ್ಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, E20 ಪೆಟ್ರೋಲ್‌ನಿಂದ ಯಾವುದೇ ಕಾರಿಗೆ ಸಮಸ್ಯೆಯಾಗಿದೆ ಎಂಬುದಕ್ಕೆ ಪುರಾವೆಗಳಿಲ್ಲ....

ನನಗೂ ಬೇಕಾದ ಖಾತೆ ಸಿಗಲಿಲ್ಲ ಆದ್ರೆ ನನಗೆ ದುಃಖನೂ ಇಲ್ಲ ಸಂತೋಷನೂ ಇಲ್ಲ : ಸತೀಶ್ ಜಾರಕಿಹೊಳಿ

ಸಂಪುಟ ವಿಸ್ತರಣೆ ಆದ್ರೂ ಸರ್ಕಾರ ಅಲುಗಾಡಲ್ಲ, ಡಿಕೆ ಶಿವಕುಮಾರ್ ಅವರೇ ಗಟ್ಟಿಯಾಗಿ ಇರ್ತಾರೆ: ವಿಜಯೇಂದ್ರಗೆ ಸತೀಶ್ ಜಾರಕಿಹೊಳಿ ಟಾಂಗ್

by Shwetha
July 9, 2026
0

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದರೆ ಸರ್ಕಾರದ ಬುಡ ಅಲ್ಲಾಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ....

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಭೀತಿ; ವಾಹನ ಸವಾರರಿಗೆ ಎಚ್ಚರಿಕೆ

by Shwetha
July 9, 2026
0

ಶಿರಾಡಿ ಘಾಟ್‌ ಸೇರಿದಂತೆ ಹಾಸನ ಜಿಲ್ಲೆಯ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ-75 (NH-75)ಯಲ್ಲಿ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಈ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

by Shwetha
July 9, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram