ತಿರುವನಂತಪುರಂ: ಕೇರಳದ (Kerala) ಕೊಚ್ಚಿಯಲ್ಲಿ (Kochi) ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ 61 ವರ್ಷದ ಮಹಿಳೆ ಇದಕ್ಕೆ ಬಲಿಯಾಗಿದ್ದಾರೆ.
ಮಹಿಳೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದೆ. ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಮಹಿಳೆಗೆ ಶೇ. 70ರಷ್ಟು ಸುಟ್ಟ ಗಾಯಗಳಾಗಿತ್ತು. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ವೆಂಟಿಲೇಟರ್ ನಲ್ಲಿದ್ದರು ಎನ್ನಲಾಗಿದ್ದು, ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮಹಿಳೆಗೆ ಆರಂಭದಲ್ಲಿ ಬೇರೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಎರ್ನಾಕುಲಂ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್ನ ಲಿಬಿನಾ ಎಂಬ 12 ವರ್ಷದ ಬಾಲಕಿ ಕೂಡ ಸಾವನ್ನಪ್ಪಿದ್ದಳು.
ಘಟನಾ ಸ್ತಳದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.