ಕೇರಳದ RSS ಕಚೇರಿ ಮೇಲೆ ಬಾಂಬ್ ದಾಳಿ – ಕಿಟಕಿ ಗಾಜು ಪುಡಿಪುಡಿ…
RSS ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ನಡೆದಿದೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ದಾಳಿ ನಡೆದಿದ್ದು, ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಬಾಂಬ್ ದಾಳಿಯ ಯಾರಿಗೂ ಗಾಯಗಳಾಗಿಲ್ಲ, ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಪಯ್ಯನ್ನೂರು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 1.30 ರ ಸುಮಾರಿಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪಯ್ಯನ್ನೂರಿನಲ್ಲಿರುವ ರಾಷ್ಟ್ರ ಭವನ ಎಂಬ ಆರ್ಎಸ್ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಅನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಈ ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆಯ ವೇಳೆ ಆರ್ಎಸ್ಎಸ್ ಕಚೇರಿಯಲ್ಲಿ ಬೆರಳೆಣಿಕೆಯಷ್ಟು ಜನರಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಬೆಳಗ್ಗೆ 6 ಗಂಟೆಗೆ ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಲಭ್ಯತೆಯ ಕೊರತೆಯಿಂದಾಗಿ ಕೃತ್ಯದ ಹಿಂದಿರುವ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ.
Kerala | Visuals from RSS office in Payyannur, Kannur which was allegedly bombed early this morning, leaving the window glass broken pic.twitter.com/ALjpuXNH2K
— ANI (@ANI) July 12, 2022