Pinarayi Vijayan | ನಾಳೆ ಬಾಗೇಪಲ್ಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಚಿಕ್ಕಬಳ್ಳಾಪುರ : ನಾಳೆ ಬಾಗೇಪಲ್ಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಲಿದ್ದಾರೆ.
ರಾಜ್ಯಮಟ್ಟದ ಸಿಪಿಐಎಂ ಪಕ್ಷದ ರಾಜಕೀಯ ಸಮಾವೇಶವನ್ನು ಪಿಣರಾಯಿ ವಿಜಯನ್ ಉದ್ಘಾಟಿಸಲಿದ್ದಾರೆ.
ಬಾಗೇಪಲ್ಲಿ ಪಟ್ಟಣ ಹೊರವಲಯದ ಹೊಸಹುಡ್ಯ ಬಸ್ ಡಿಪೋ ಬಳಿ ಬೃಹತ್ ಕಾರ್ಯಕ್ರಮ ಆಯೋಜನೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪಾಲಿಟ್ ಸಿಪಿಐಎಂ ಬ್ಯೂರೋ ಸದಸ್ಯ ಎಂ.ಎ.ಬೇಬಿ. ಬಿ.ವಿ.ರಾಘವುಲು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ನಾಳೆ ಬೆಳಿಗ್ಗೆ 11 ಗಂಟೆಗೆ ಬಾಗೇಪಲ್ಲಿ ನ್ಯಾಷನಲ್ ಕಾಲೇಜಿನಿಂದ ಬೃಹತ್ ರೋಡ್ ಶೋ ಆರಂಭವಾಗಲಿದೆ.
ಬಾಗೇಪಲ್ಲಿ ಪಟ್ಟಣ ದಲ್ಲಿ ಕಾರ್ಯಕ್ರಮದ ಸಿದ್ಧತೆ ಬಹುತೇಕ ಪೂರ್ಣವಾಗಿದೆ.