ದುಬೈಗೆ ವಿಮಾನ ಸೇವೆಗಳನ್ನು ಪುನರಾರಂಭಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ಕೇರಳ ಸಿಎಂ
ತಿರುವನಂತಪುರಂ, ಜೂನ್ 23: ದುಬೈಗೆ ವಿಮಾನ ಸೇವೆಗಳನ್ನು ಪುನರಾರಂಭಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.
ಕೋವಿಡ್ -19 ಲಾಕ್‌ಡೌನ್ ಕಾರಣದಿಂದಾಗಿ ವಿದೇಶದಲ್ಲಿ ಸಿಲುಕಿಕೊಂಡಿರುವ ನಿವಾಸಿಗಳಿಗೆ ಜೂನ್ 22 ರಿಂದ ಎಮಿರೇಟ್‌ಗೆ ಮರಳಲು ಕೊಲ್ಲಿ ರಾಷ್ಟ್ರ ಅವಕಾಶ ನೀಡಿದ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದುಬೈಗೆ ವಿಮಾನ ಸೇವೆಗಳನ್ನು ಪುನರಾರಂಭಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇರಳದ ಅನೇಕರು ದುಬೈ ಮತ್ತು ಇತರ ಕೊಲ್ಲಿ ಪ್ರದೇಶಗಳಲ್ಲಿ ಕೆಲಸಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ಇದನ್ನು ಪರಿಗಣಿಸಿ, ದುಬೈಗೆ ವಿಮಾನ ಸೇವೆಗಳನ್ನು ಪುನರಾರಂಭಿಸಲು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಪಿಣರಾಯಿ ವಿಜಯನ್ ಪಿಎಂ ಮೋದಿಗೆ ಇಮೇಲ್ ನಲ್ಲಿ ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಮಾನ ಪ್ರಯಾಣ ಕೈಗೊಳ್ಳಲು ನೋ ಕೊವಿಡ್ ಸರ್ಟಿಫಿಕೇಟ್ ಕಡ್ಡಾಯ ಎನ್ನುವ ನಿಯಮವನ್ನು ಕೇರಳ ಸರ್ಕಾರ ವಾಪಸ್ ತೆಗೆದುಕೊಳ್ಳಿ ಎಂದು ಇಮೇಲ್ ನಲ್ಲಿ ಬರೆದಿದ್ದಾರೆ.