ಮಂಗಳೂರು: ಶತ್ರು ಭೈರವಿ ಯಾಗದ ಕುರಿತು ಡಿಸಿಎಂ ಡಿಕೆಶಿ ಮಾಡಿರುವ ಆರೋಪಕ್ಕೆ ಕೇರಳ ಸರ್ಕಾರ ಸ್ಪಷ್ಟನೆ ನೀಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್, ಕೇರಳದ (Kerala) ರಾಜರಾಜೇಶ್ವರಿ ದೇವಾಲಯದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ ಎಂದು ಆರೋಪಿಸಿದ್ದರು.
ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇರಳ ಸರ್ಕಾರ (Kerala Government) ತನಿಖೆ ನಡೆಸಿ, ತಳಿಪರಂ ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ರೀತಿಯ ಶತ್ರುಭೈರವಿ ಯಾಗ, ಪ್ರಾಣಿ ಬಲಿ ನಡೆದಿಲ್ಲ ಎಂದು ಹೇಳಿದೆ. ಈ ಮೂಲಕ ಡಿಸಿಎಂಗೆ ಹಿನ್ನಡೆಯಾದಂತಾಗಿದೆ.