ತೂಕ್ತೇ ಚಂಡಮಾರುತದ ಅಟ್ಟಹಾಸ – ಕೇರಳದಲ್ಲಿ ಇಬ್ಬರು ಬಲಿ
ಕೇರಳ : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಪರಿಣಾಮ ದೇಶದ ಕರಾವಳಿ ಭಾಗಗಳಲ್ಲಿ ಚಂಡಮಾರುತದ ಎಫೆಕ್ಟ್ ತೀವ್ರವಾಗಿದೆ.. ತೌಕ್ತೇ ಚಂಡಮಾರುತದಿಂದ ಹಲವೆಡೆ ಸಾವು ನೋಡುವಗಳು ಸಂಭವಿಸಿದ್ದು, ಹಾನಿಯುಂಟಾಗಿದೆ.. ಕೇರಳದಲ್ಲೂ ಚಂಡಮಾರುತದ ಆರ್ಭಟ ಮುಂದುವರೆದಿದೆ.. ಭಾರೀ ಮಳೆಯಾಗ್ತಿದ್ದು, ರೆಡ್ ಅಲರ್ಟ್ ಘಘೋಷಣೆಯಾಗಿದೆ. ತಿರುವನಂತಪುರಂ, ಕೊಲ್ಲಂ, ಪಥನಂತಿಟ್ಟ, ಮಲಪ್ಪುರಂ, ಕೋಳಿಕ್ಕೊಡ್, ವಯನಾಡು,ಕಣ್ಣೂರು,ಕಾಸರಗೋಡು ಭಾಗದಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿರಲಿದೆ ಎಂದು ಕೇರಳ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಹೇಳಿದೆ. ಈವರೆಗೂ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ.
ಕೇರಳದಲ್ಲಿ ಮೇ 16ರಂದು ಎರ್ನಾಕುಲಂ, ಇಡುಕ್ಕಿ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಜಾರಿಯಲ್ಲಿದೆ. ಇತರೆ ಜಿಲ್ಲೆಗಳಲ್ಲಿ ಯೆಲ್ಲೂ ಜಿಲ್ಲೆಗಳಲ್ಲಿ ಅಲರ್ಟ್ ಇದೆ. ತ್ರಿಸ್ಸೂರು ಜಿಲ್ಲೆಯಲ್ಲಿ ತೀರ ಪ್ರದೇಶದಲ್ಲಿದ್ದ 350 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸೇರಿಸಲಾಗಿದೆ. ಮುಟ್ಟಾರ್, ಎಡಥ್ವಾ, ತಲವಾಡಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೇಂದ್ರದಿಂದ 42 ತ್ವರಿತ ಕಾರ್ಯಾಚರಣೆ ತಂಡಗಳು ಕೇರಳದ 6 ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ ಕೋಸ್ಟ್ ಗಾರ್ಡ್, ಭಾರತೀಯ ನೌಕಾಪಡೆ, ಸೇನಾ ಪಡೆ ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.