Kerala : ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಸಾವು…
ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಕೇರಳ ಮೂಲದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ.
ಕೇರಳದ ಪೆರುಂಬಳದ ಅಂಜು ಶ್ರೀಪಾರ್ವತಿ ಎಂಬುವವರು ಶನಿವಾರ ಸ್ಥಳೀಯ ಹೋಟೆಲ್ ನ ಬಿರಿಯಾನಿ ಖಾದ್ಯವಾದ ಕುಜಿಮಂತಿಯನ್ನ ಸೇವಿಸಿ ಸಾವನ್ನಪ್ಪಿದ್ದಾರೆ. ಡಿಸೆಂಬರ್ 31 ರಂದು ಕಾಸರಗೋಡಿನ ರೋಮ್ಯಾನ್ಸಿಯಾ ಎಂಬ ರೆಸ್ಟೋರೆಂಟ್ನಿಂದ ಆನ್ಲೈನ್ನಲ್ಲಿ ಖರೀದಿಸಿದ ಕುಜಿಮಂತಿ ಬಿರಿಯಾನಿಯನ್ನು ಸೇವಿಸಿದ ನಂತರ ಆಕೆಗೆ ಹೊಟ್ಟೆ ನೋವು ಪ್ರಾರಂಭವಾಗಿತ್ತು, ತಕ್ಷಣ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಕೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆಗೆ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವಾಗಲೇ ಶನಿವಾರ ಮುಂಜಾನೆ ಯುವತಿ ಸಾವನ್ನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Kerala: Young woman dies after eating biryani ordered online