ಕೊರೊನಾ ಲಾಕ್ ಡೌನ್ ಹಿನ್ನೆಲೆ ಮನೆಯಲ್ಲೇ ಉಳಿದುಕೊಂಡಿರುವ ಕ್ರಿಕೆಟರ್ ಗಳು ಟೈಮ್ ಪಾಸ್ ಮಾಡೋಕೆ ಸೋಷಿಯಲ್ ಮೀಡಿಯಾಗಳ ಮೊರೆ ಹೋಗಿದ್ದಾರೆ. ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಡೇವಿಡ್ ವಾರ್ನರ್, ಯಜುವೇಂದ್ರ ಚಹಲ್ ಸೇರಿದಂತೆ ಹಲವು ಸ್ಟಾರ್ಸ್ ಲೈವ್ ಚಾಟ್, ಟಿಕ್ ಟಾಕ್ ವಿಡಿಯೋಗಳಲ್ಲಿ ಫುಲ್ ಬ್ಯುಸಿ ಆಗಿದ್ದಾರೆ. ಅದರಲ್ಲೂ ಆಸೀಸ್ ನ ಸ್ಟಾರ್ ಕ್ರಿಕೆಟರ್ ಡೇವಿಡ್ ವಾರ್ನರ್ ಭಾರತೀಯ ಚಿತ್ರಗಳ ಹಾಡುಗಳಿಗೆ ಹೆಜ್ಜೆ ಹಾಕುತ್ತಾ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.
ಇದೀಗ ಆ ಸಾಲಿಗೆ ಇಂಗ್ಲೆಂಡ್ ಟೀಂನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಕೂಡ ಸೇರಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ರ ಸಂಗೀತವಿರುವ ತಮಿಳಿನ ಜಂಟಲ್ ಮನ್ ಚಿತ್ರದ ಓಟ್ಟಗಥೈ ಕಾಟ್ಟಿಕೋ ಹಾಡಿಗೆ ಕೆವಿನ್ ಮಸ್ತ್ ಸ್ಟೆಪ್ಸ್ ಹಾಕಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ತಮ್ಮ ಹಾಡಿಗೆ ಕೆವಿನ್ ಡ್ಯಾನ್ಸ್ ಮಾಡಿರುವ ವಿಡಿಯೋವನ್ನ ನೋಡಿದ ಎ.ಆರ್. ರೆಹಮಾನ್ ಕೂಡ ಇನ್ ಸ್ಟಾಗ್ರಾಮ್ ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.