KGF 2 , Kantara : ರಾಜಕೀಯ ವಾಗ್ಯುದ್ಧದಲ್ಲಿ KGF2, ಕಾಂತಾರ ಎಳೆತಂದ ಸಿದ್ದರಾಮಯ್ಯ..!!!
ರಾಜ್ಯದಲ್ಲಿ 2023 ರ ವಿಧಾನಸಭಾ ಎಲೆಕ್ಷನ್ ಗೆ ಈಗಿನಿಂದಲೇ ಸರ್ವ ಪಕ್ಷಗಳು ತಯಾರಾಗ್ತಿದ್ದು , ರಾಜಕೀಯ ಕೆಸರೆರೆಚಾಟ ಮುಂದುವರೆದಿದೆ..
ಅಂದ್ಹಾಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪ ಗದ್ದಲದಲ್ಲಿ ಇದೀಗ ಸಿದ್ದರಾಮಯ್ಯ ಅವರು ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದಂತಹ ರೆಡು ಕನ್ನಡ ಸಿನಿಮಾಗಳನ್ನ ಳೆತಂದಿದ್ದಾರೆ..
KGF 2 ಹಾಗೂ ಕಾಂತಾರದ ಬಗ್ಗೆ ಮಾತನಾಡಿದ್ದಾರೆ..
ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಹೆಸರಿನಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿವೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದೆ.
ಹೊಂಬಾಳೆ ಫಿಲಮ್ಸ್ ನ ಮಾಲೀಕರಾದ ವಿಜಯ್ ಕಿರಗಂದೂರು ಅವರಿಗೆ ಅಶ್ವತ್ಥ್ ನಾರಾಯಣ್ ಅವರು ಸಂಬಂಧಿಯಾಗಿದ್ದಾರೆ..
ಮತದಾರರ ಪಟ್ಟಿಯ ದುರುಪಯೋಗಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಯ ಹೆಸರು ಬಲವಾಗಿ ಕೇಳಿಬಂದಿದೆ. ಚಿಲುಮೆ ಸಂಸ್ಥೆಯು ಈ ಹಿಂದೆ ಹೊಂಬಾಳೆ ಹೆಸರಿನಲ್ಲಿ ಚಟುವಟಿಕೆಯಲ್ಲಿತ್ತು ಎನ್ನುವ ವಿವಾದವೂ ಆಗಿದೆ.. .
ಹಾಗಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆ ಫಿಲ್ಮಸ್ ಸಂಸ್ಥೆಯಿಂದ ನಿರ್ಮಾಣವಾದ ಕಾಂತಾರ , ಕೆಜಿಎಫ್ 2 ಸಿನಿಮಾಗಳ ಹೆಸರನ್ನು ಉಪಯೋಗಿಸಿಕೊಂಡು, ಅಶ್ವತ್ಥ್ ನಾರಾಯಣ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ, ಪಂಜುರ್ಲಿಯ ದಂತಕಥೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ ಅದನ್ನೇ ಮಾಡಬೇಕು ಎಂದು ಟ್ವಿಟ್ ಮಾಡಿದ್ದಾರೆ.
ಈ ಟ್ವಿಟ್ ಭಾರೀ ವೈರಲ್ ಆಗಿದ್ದು ಸಂಚಲನವನ್ನೇ ಸೃಷ್ಟಿ ಮಾಡಿದೆ.. ಪರ ವಿರೋಧ ಚರ್ಚೆಗೆ ಗ್ರಾಸವಾಗಿದ್ದು , ಮತ್ತೊಂದು ಆಯಾಮವನ್ನೇ ಈ ಪ್ರಕರಣ ಪಡೆದುಕೊಳ್ತಿದೆ..