ರಿಲೀಸ್ ಆಗಿ 40 ದಿನಗಳೇ ಕಳೆದ್ರೂ KGF 2 ಸಿನಿಮಾದ ಅಬ್ಬರ ಮಾತ್ರ ಕಡಿಮೆಯಾಗಿಲ್ಲ.. ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ಈಗಲೂ ಮೋಡಿ ಮಾಡ್ತಿದೆ.. ಯಶ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ KGF 2 ಸಿನಿಮಾ 50ನೇ ದಿನದ ಸನಿಹಕ್ಕೆ ತಲುಪುತ್ತಿದೆ. ಈಗಾಗಲೇ ಸಿನಿಮಾ 1200 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ..
ಈ ಸಿನಿಮಾದಲ್ಲಿ ಧೂಮಪಾನಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಅದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಈ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದ್ರೆ ಇದೀಗ ಆ ಅರ್ಜಿ ವಜಾಗೊಂಡಿದೆ..
ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘದಿಂದ ಹೈಕೋರ್ಟ್‌ಗೆ KGF 2 ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇದೊಂದು ಸಮಾಜಿಕ ಕಳಕಳಿ ಇಲ್ಲದ ಸಿನಿಮಾ. ಧೂಮಪಾನವನ್ನು ವಿಜೃಂಭಿಸಲಾಗಿದೆ. ಇದರಿಂದಾಗಿ ಮಕ್ಕಳು ಮತ್ತು ಯುವಕರ ಮೇಲೆ ದುಷ್ಟಪರಿಣಾಮ ಬೀರಲಿದೆ ಎಂದು ಅರ್ಜಿಲಯಲ್ಲಿ ಉಲ್ಲೇಖಿಸಲಾಗಿತ್ತು. ಸಿನಿಮಾ ತಡೆ ಹಿಡಿದು, ಸೆನ್ಸಾರ್ ಮಂಡಳಿಯು ಕೊಟ್ಟಿರುವ ಯು/ಎ ಪ್ರಮಾಣ ಪತ್ರವನ್ನು ಹಿಂಪಡೆಯಬೇಕೆಂದು ಕೇಳಿತ್ತು.
ನ್ಯಾಯಮೂರ್ತಿಗಳಾದ ರಿತುರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠವು ಈ ಅರ್ಜಿ ವಿಚಾರಣೆಯನ್ನು ನಡೆಸಿ ವಾದ ಪ್ರತಿವಾದಗಳನ್ನ ಆಲಿಸಿ ಅಂತಿಮವಾಗಿ ಅರ್ಜಿ ವಜಾಗೊಳಿಸಿದೆ..