ಬೆಂಗಳೂರು : ಕೆಜಿಎಫ್ ಮೂವಿ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ಶ್ರೀನಿಧಿ ಶೆಟ್ಟಿ, ಸದ್ಯ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ರಾಕಿಭಾಯ್ ಬೆಡಗಿಯ ನಿಶ್ಚತಾರ್ಥದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ನಟಿ ಶ್ರೀನಿಧಿ ಅವರೇ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆ ಮತ್ತು ಕೆಲವು ಫೋಟೋಗಳನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶ್ರೀನಿಧಿ ತಮಿಳು ನಟ ವಿಕ್ರಮ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಆದ್ರೆ ಇದು ರಿಯಲ್ ಆಗಿ ಅಲ್ಲ, ಸಿನಿಮಾದಲ್ಲಿ.
ಹೌದು..! ಸದ್ಯ ‘ಕೆಜಿಎಫ್-2’ ನಲ್ಲಿ ಶ್ರೀನಿಧಿ ಬ್ಯುಸಿಯಾಗಿದ್ದಾರೆ. ಜೊತೆಗೆ ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದು, ಈ ಸಿನಿಮಾದಲ್ಲಿ ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ ನಾಯಕನಾಗಿ ಅಭಿನಯಿಸಿದ್ದಾರೆ. ಇವರಿಗೆ ಜೋಡಿಯಾಗಿ ಶ್ರೀನಿಧಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಹಾಡೊಂದು ಇಂದು ಬಿಡುಗಡೆಗೆ ಸಿದ್ಧವಾಗಿದೆ.
ಈ ಹಾಡು ನಾಯಕ ಮತ್ತು ನಾಯಕಿಯ ನಿಶ್ಚಿತಾರ್ಥಕ್ಕೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಹಾಡಿನ ಬಿಡುಗಡೆಗೆ ವಿಶೇಷ ಆಮಂತ್ರಣ ಪತ್ರಿಕೆಯನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಪೋಸ್ಟನ್ನು ನಟಿ ಶ್ರೀನಿಧಿ ಕೂಡ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿ ಇಂದು ಹಾಡು ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದರು. ಅಲ್ಲದೇ ಹಾಡಿನ ಕೆಲವು ನಿಶ್ಚಿತಾರ್ಥದ ಫೋಟೋಗಳನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ.