ಕಾರವಾರ : ಮಾಜಿ ಸಂಸದರ ಪತ್ನಿಯ ಕುತ್ತಿಗೆಗೆ ಕೈ ಹಾಕಿದ ಖದೀಮರು ಮಾಂಗಲ್ಯ ಸರ ಕಿತ್ತು ಪರಾರಿಯಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಮಾಜಿ ಸಂಸದ ದೇವರಾಯ ನಾಯ್ಕ (Devaraya Naik) ಅವರ ಪತ್ನಿಯ ಮಾಂಗಲ್ಯ ಸರವನ್ನೇ ಖದೀಮರು ದೋಚಿ ಪರಾರಿಯಾಗಿದ್ದಾರೆ. ನೀರು ಕೇಳುವ ನೆಪದಲ್ಲಿ ಬಂದು ಮಾಂಗಲ್ಯ ದೋಚಿ ಪರಾರಿಯಾಗಿದ್ದಾರೆ.
ಕಾಂಗ್ರೆಸ್‌ನಿಂದ 4 ಬಾರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದ ದೇವರಾಯ ನಾಯ್ಕ ಅವರ ಪತ್ನಿ ಗೀತಾ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದಾಜು 3 ಲಕ್ಷ ರೂ. ಮೌಲ್ಯದ 20 ಗ್ರಾಂ ತೂಕದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ. ವಿಷಯ ತಿಳಿದ ನಂತರ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಮಗ ನಾಗರಾಜ್ ನಾಯ್ಕ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








