ಜ್ಯುವೆಲರಿ ಮಾಲೀಕನ ಮೇಲೆ ಗುಂಡು ಹಾರಿಸಿ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದೆ. ರಾತ್ರಿ ವೇಳೆ ಚಿನ್ನಾಭರಣ ವ್ಯಾಪಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಮಾಲೀಕನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಎಸ್ಪಿ ಅಪರ್ಣಾ ಗುಪ್ತ ಅವರು ತನಿಖೆ ಕೈಗೊಂಡಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಗಾಯಗಳಾಗಿವೆ. ಮಾಲೀಕ ಎಂದಿನಂತೆ ಅಂಗಡಿ ಮುಚ್ಚಿ ಬ್ಯಾಗ್ನಲ್ಲಿ ಚಿನ್ನಾಭರಣ ಹಾಕಿಕೊಂಡು ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.