‘ಖಾದಿ ಫಾರ್ ನೇಷನ್’ ಆದರೆ ಚೈನೀಸ್ ಪಾಲಿಸ್ಟರ್ ರಾಷ್ಟ್ರಧ್ವಜಕ್ಕೆ – ಮೋದಿ ವಿರುದ್ಧ ರಾಹುಲ್ ವಾಗ್ದಾಳಿ..
ಪ್ರಧಾನಿ ಮೋದಿ ಖಾದಿ ವಿಚಾರದಲ್ಲಿ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಅವರಾಡುವ ಮಾತುಗಳಿಗೂ ಮತ್ತು ಅವರು ಮಾಡುವ ಕೆಲಸಗಳಿಗೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಖಾದಿ ಮಹತ್ವವನ್ನು ನೆನಪಿಸಿಕೊಳ್ಳುವ ಸಲುವಾಗಿ ಸಾಬರಮತಿ ನದಿ ತೀರದಲ್ಲಿ ಆಯೋಜಿಸಿದ್ದ `ಖಾದಿ ಉತ್ಸವ’ದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಕನಸಿಗೆ ಖಾದಿ ಪ್ರಮುಖ ಶಕ್ತಿಯಾಗಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು. ಇದೀಗ ಈ ಹೇಳಿಕೆಗೆ ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
‘ಖಾದಿ ಫಾರ್ ನೇಷನ್’ ಆದರೆ ಚೈನೀಸ್ ಪಾಲಿಸ್ಟರ್ ರಾಷ್ಟ್ರಧ್ವಜಕ್ಕೆ. ಪ್ರಧಾನಿಯವರು ಆಡುವ ಮಾತಿಗೂ ಮತ್ತು ಮಾಡುವ ಕೆಲಸಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.








