ನವದೆಹಲಿ: ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಡಿ ಗುಕೇಶ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದರೊಂದಿಗೆ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ. 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಸಮಿತಿಯ ಶಿಫಾರಸುಗಳ ಆಧಾರದ ಮೇಲೆ, ಪರಿಶೀಲನೆಯ ನಂತರ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯ ಮತ್ತು ಘಟಕಗಳಿಗೆ ಪ್ರಶಸ್ತಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವಾಲಯ ಹೇಳಿಕೆಯಲ್ಲಿ ಹೇಳಿದೆ.








