ಬಡ ಮಕ್ಕಳ ನೆರವಿಗೆ ಧಾವಿಸಿದ ಅಭಿನಯ ಚಕ್ರವರ್ತಿ
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಮತ್ತೊಂದೆಡೆ ಲಾಕ್ ಡೌನ್ ನಿಂದಾಗಿ ಬಡವರು , ಸಿನಿಮಾ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.. ಅನೇಕರು ಒಂದು ಹೊತ್ತಿನ ಊಟಕ್ಕೆ ಕಷ್ಟ ಪಡುವ ಪರಿಸ್ಥಿತಿ ಎದುರಾಗಿದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಪುನೀತ್ ರಾಜ್ ಕುಮಾರ್ , ಯಶ್, ದರ್ಶನ್, ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಅಂತೆಯೇ ಕಿಚ್ಚ ಸುದೀಪ್ ಅವರು ಸಹ ಸಾಕಷ್ಟು ಸಾಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಸುದೀಪ್ ಬೆಂಬಲದ ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಗುರಿಯನ್ನು ವಿಧಿಸಿಕೊಂಡಿದೆ. ಸಣ್ಣ ಮಕ್ಕಳನ್ನು ಹೊಂದಿದ ಬಡಕುಟುಂಬದ ಮನೆ ಬಾಗಿಲಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ತಲುಪಿಸುವ ಯತ್ನವನ್ನು ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿದೆ.
1 ರಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ಸುದೀಪ್ ಟ್ರಸ್ಟ್ ಸದಸ್ಯರು ನೀಡಲಿದ್ದಾರೆ. ‘ಮುಂದಿನ ಭಾರತ, ಸ್ವಸ್ಥ ಭಾರತ’ ನಾಳೆಯ ಭರವಸೆಯ ಬೆಳಕಿಗೆ ಜೊತೆಯಾಗಲು ಕರೆ ಮಾಡಿ ಎಂದು ಸಂಪರ್ಕ ಸಂಖ್ಯೆಯನ್ನು ನೀಡಿದ್ದಾರೆ ತಮ್ಮ ಪೋಸ್ಟರ್‌ಗಳಲ್ಲಿ.
ಈ ಹಿಂದೆ ಚಿತ್ರರಂಗದ ಬಹುತೇಕ ಹಿರಿಯ ನಟ, ನಟಿಯರಿಗೆ ದಿನಸಿ ಕಿಟ್, ಔಷಧಗಳನ್ನು ನೀಡಿದ ಕಿಚ್ಚ ಸುದೀಪ್, ಸಾರ್ವಜನಿಕರಿಗೂ ಆಹಾರ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿದ್ದರು. ಇದೀಗ ಬಡ ಮಕ್ಕಳ ಆರೋಗ್ಯದ ಸುಧಾರಿಸುವತ್ತ ಗಮನ ಕೇಂದ್ರೀಕರಿಸಿದ್ದಾರೆ.
ಅಂದ್ಹಾಗೆ ಕೋವಿಡ್ 3ನೇ ಅಲೆಯ ಎಚ್ಚರಿಕೆ ನೀಡಿರುವ ತಜ್ಞರು , ಮಕ್ಕಳೇ ಟಾರ್ಗೆಟ್ ಆಗಬಹುದೆಂಬ ಆಘಾತಕಾರಿ ಸಂಗತಿ ಹೊರಹಾಕಿದ್ದಾರೆ.. ಹೀಗಾಗಿ ಇಂತಹ ಪರಿಸ್ಥಿತಿಯಲ್ಲಿ ಬಡ ಮಕ್ಕಳ ನೆರವಿಗೆ ಕಿಚ್ಚ ಸುದೀಪ ಚಾರಿಟೇಬಲ್ ಟ್ರಸ್ಟ್ ಮುಂದಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.