ವಿಶೇಷ ಚೇತನ ಮಕ್ಕಳ ನೆರವಿಗೆ ಕಿಚ್ಚ ಸುದೀಪ್..!
ಚಾಮರಾಜನಗರ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ 40ಕ್ಕೂ ಹೆಚ್ಚು ಮಕ್ಕಳಿರುವ ಪೃಥ್ವಿ ವಿಶೇಷ ಚೇತನರ ಶಾಲೆಯ ನೆರವಿಗೆ ಧಾವಿಸಸಿದ್ದಾರೆ ಸ್ಯಾಂಡಲ್ ವುಡ್ ನ ಬಾದ್ ಷಾ.. ಹೌದು ವಿಶೇಷ ಚೇತನ ಮಕ್ಕಳಿರುವ ಚಾಮರಾಜನಗರದ ಗುಮಡ್ಲುಪೇಟೆಯಲ್ಲಿರುವ ಪೃಥ್ವಿ ಶಾಲೆಯ ಕಟ್ಟಡ ಮಳೆ ಬಂದರೆ ಸೋರುತ್ತದೆ. ಲಾಕ್ ಡೌನ್ ನಿಂದಾಗಿ ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇದು ಕಿಚ್ಚ ಸುದೀಪ್ ಅವರ ಗಮನಕ್ಕೆ ಬರುತ್ತಿದ್ದಂತೆ ನೆರವಿಗೆ ಧಾವಿಸಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ರಾಜ್ಯ ಮುಖಂಡ ರಮೇಶ್ ಕಿಟ್ಟಿ ಹಾಗೂ ಜಿಲ್ಲಾ ಮುಖಂಡರಾದ ಸೋಮ ನಾಯಕ, ಪರಶಿವ ಅವರ ತಂಡ ಇತ್ತೀಚೆಗೆ ಶಾಲೆಗೆ ಭೇಟಿ ನೀಡಿ, ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಿಸಿ ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ವಸತಿ ಶಾಲೆಯು ಬಾಡಿಗೆ ಕಟ್ಟಡದಲ್ಲಿದ್ದು ಅವಕಾಶ ಕೊಟ್ಟರೇ ಇದೇ ಕಟ್ಟಡವನ್ನು ದುರಸ್ತಿ ಮಾಡಿಸಲಾಗುವುದು. ಇಲ್ಲವೇ ಬೇರೆ ಕಟ್ಟಡ ನೋಡಿ ಶಾಲೆಯನ್ನು ಸ್ಥಳಂತಾರಿಸುವ ಕೆಲಸವನ್ನು ಚಾರಿಟೇಬಲ್ ಸೊಸೈಟಿ ಮಾಡಲಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.