ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ನಟ ಸುದೀಪ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಭಾವನಾತ್ಮಕ ಪೋಸ್ಟ್:”ಕಳೆದ 11 ಸೀಸನ್ಗಳಿಂದ ನಾನು ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಎಲ್ಲರಿಗೂ ಧನ್ಯವಾದಗಳು. ಮುಂಬರುವ ಫಿನಾಲೆ, ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಅವಕಾಶ ನೀಡಿದ ಕಲರ್ಸ್ ಕನ್ನಡಗೆ ಧನ್ಯವಾದಗಳು,” ಎಂದು ಕಿಚ್ಚ ಸುದೀಪ್ ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಅಭಿಮಾನಿಗಳ ಒತ್ತಾಯ:ಬಿಗ್ ಬಾಸ್ ಸೀಸನ್ 11 ಕಾರ್ಯಕ್ರಮ ನಡೆಯುವ ಮೊದಲು ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ಕಿಚ್ಚ ಸುದೀಪ್ ಅವರು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಬಿಗ್ ಬಾಸ್ ಸೀಸನ್ 11 ಶೋ ನಡೆಸಲು ಒಪ್ಪಿಗೆ ನೀಡಿದ್ದರು.
ಕಾರಣ ಹೀಗಿದೆ..!
“ಕಳೆದ ಬಿಗ್ ಬಾಸ್ ಸೀಸನ್ ನಡೆಯುವಾಗ ನನ್ನ ಸಿನಿಮಾದ ಶೂಟಿಂಗ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುತ್ತಿತ್ತು. ಚೆನ್ನೈನಿಂದ ಅಲ್ಲಿಗೆ ಹೋಗಲು ಒಂದೂವರೆ ಗಂಟೆ ಬೇಕು. ಬೆಂಗಳೂರಿನಿಂದ ನಾನು ಅಲ್ಲಿಗೆ ಹೋಗಿ, ಅಲ್ಲಿ ಶೂಟಿಂಗ್ ಮಾಡಿ, ಮಧ್ಯರಾತ್ರಿ ಶೂಟಿಂಗ್ ಮುಗಿಸಿ, ಖಾಸಗಿ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ಬಂದು ಬಿಗ್ ಬಾಸ್ ಎಪಿಸೋಡ್ ನೋಡಿ, ವೀಕೆಂಡ್ ಸಂಚಿಕೆ ಶೂಟ್ ಮಾಡಬೇಕು. ಇದರಿಂದ ನನಗೆ ತುಂಬ ಸುಸ್ತಾಗುತ್ತಿತ್ತು,” ಎಂದು ಖಾಸಗಿ ಸಂದರ್ಶನದಲ್ಲಿ ನಟ ಸುದೀಪ್ ಅವರು ತಿಳಿಸಿದ್ದರು.








