133 ವರ್ಷದ ಹಳೆಯ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!
ಸರಳ , ಸಜ್ಜನತೆ ಜೊತೆಗೆ ಸದಾ ಮಾನವೀಯ ಗುಣಗಳಲ್ಲಿ ತೊಡಗಿಸಿಕೊಳ್ಳುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇದೀಗ ಮತ್ತೊಂದು ಮಹತ್ಕಾರ್ಯದ ಅಭಿಮಾನಿಗಳ ಮನ ಗೆದ್ದಿದ್ದಾರೆ. ಕಿಚ್ಚ ಸುದೀಪ್ ನಟನೆಯ ಜೊತೆಗೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಅವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಜನರಿಗೆ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುತ್ತಲೇ ಇರುತ್ತೆ. ಇದೀಗ ಅಭಿನಯ ಚಕ್ರವರ್ತಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಸುಮಾರು 133 ವರ್ಷ ಹಳೆಯ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ. ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ ಈ ಕನ್ನಡ ಶಾಲೆಯನ್ನು ದತ್ತು ಪಡೆಯಲಾಗಿದೆ. ಶಿವಮೊಗ್ಗದ ಬಿ ಎಚ್ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ ಇದಾಗಿದೆ. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ದತ್ತು ಪಡೆದಿರುವ ಸುದೀಪ್ ಅವರ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಅದರ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಶಾಲೆಯ ಕಟ್ಟದ ನಿರ್ಮಾಣ ಕೆಲಸ, ಪೈಟಿಂಗ್, ಶೌಚಾಲಯ ನಿರ್ಮಾಣ ಹೀಗೆ ಶಾಲೆಗೆ ಬೇಕಾದ ಮೂಲ ಸೌಕರ್ಯವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಒದಗಿಸಿತ್ತು. ಅದರ ಜೊತೆಗೆ ನಾಲ್ಕೂ ಶಾಲೆಗಳಿಗೆ ಕಂಪ್ಯೂಟರ್ ನೀಡಲು ಮುಂದಾಗಿದೆ.
ತೆಲುಗು ಸಂದರ್ಶನದಲ್ಲಿ ‘ರಾಖಿ ಭಾಯ್’ ಕೊಂಡಾಡಿದ ವಸಿಷ್ಠ ಸಿಂಹ..!
ಆ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿದೆ. ಸಿನಿಮಾ ವಿಚಾರಕ್ಕೆ ಬರೋದಾದ್ರೆ ಸುದೀಪ್ ಅವರ ಅಭಿನಯದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.. ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಟಾಪ್ 1 ನಲ್ಲಿ ಟ್ರೆಂಡ್ ಆಗ್ತಿದೆ.. ಇತ್ತ ಕೋಟಿಗೊಬ್ಬ 3 ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗಿದ್ದು, ಕೊರೊನಾ ಹಾವಳಿ ತಗ್ಗಿದ ನಂತರ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡವು ಪ್ಲಾನ್ ಮಾಡಿಕೊಂಡಿದೆ.