ಕನ್ನಡ ನಟರು ಪರಭಾಷೆಗಳಲ್ಲಿ ಸಖತ್ ಆಗಿಯೇ ಮಿಂಚುತ್ತಿದ್ದಾರೆ. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ನಮ್ಮ ನಟರಿಗೆ ಅವರದ್ದೇ ಆದ ಫ್ಯಾನ್ಸ್ ಫಾಲೋಯಿಂಗ್ ಇದೆ. ಕಿಚ್ಚ ಸುದೀಪ್, ಉಪೇಂದ್ರ, ರಾಕಿ ಭಾಯ್ ಗೆ ತೆಲುಗು ಪ್ರೇಕ್ಷಕರು ತಮ್ಮ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಇತ್ತ ತೆಲುಗು ಸಿನಿಮಾಗಳಿಗೆ ಕರ್ನಾಟಕದಲ್ಲಿಯೂ ಬೇಡಿಕೆ ಹೆಚ್ಚುತ್ತಿದೆ. ಟಾಲಿವುಡ್ ಸಿನಿಮಾಗಳು ರಾಜ್ಯದಲ್ಲಿ ಕೋಟಿ ಕೋಟಿ ಗಳಿಸುತ್ತಿವೆ.
ಇನ್ನು ತೆಲುಗುವಿನಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕನ್ನಡ ಸ್ಟಾರ್ ನಟರಿಗಾಗಿ ತೆಲುಗು ನಿರ್ದೇಶಕರು ಕಾದು ಕುಳಿತ್ತಿದ್ದಾರೆ. ಏತನ್ಮಧ್ಯೆ ಟಾಲಿವುಡ್ ಪ್ರಿನ್ಸ್ ತಮ್ಮ ಸಿನಿಮಾಗಳಲ್ಲಿ ಕನ್ನಡ ಕಲಾವಿದರಿಗೆ ಆದ್ಯತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ನಿರ್ಧಾರವನ್ನು ಮಹೇಶ್ ಬಾಬು ಮಾಡಿದ್ದು, ಇನ್ನು ತಮ್ಮ ಸಿನಿಮಾಗಳಲ್ಲಿ ಕನ್ನಡಿಗಡಿಗೆ ಪ್ರಾಶಸ್ತ್ಯ ನೀಡುವುದಾಗಿ ತಿಳಿಸಿದ್ದಾರೆ. ಅವರ ಬಹು ನಿರೀಕ್ಷಿತ ಚಿತ್ರ ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್ ಬಾಬು ಎದುರು ಉಪೇಂದ್ರ ತೊಡೆ ತಟ್ಟಲಿದ್ದಾರೆ ಎನ್ನಲಾಗಿದೆ.
ಕಾರಣ ಏನಿರಬಹುದು..?
ತೆಲುಗು ಸಿನಿಮಾಗಳಿಗೆ ಕರ್ನಾಟಕದಲ್ಲಿಯೂ ಬೇಡಿಕೆ ಹೆಚ್ಚುತ್ತಿದೆ. ಟಾಲಿವುಡ್ ಸಿನಿಮಾಗಳು ರಾಜ್ಯದಲ್ಲಿ ಕೋಟಿ ಕೋಟಿ ಗಳಿಸುತ್ತಿವೆ. ಮಾತ್ರವಲ್ಲದೆ ಬೇರೆ ಭಾಷೆಗಳ ಸಿನಿಮಾಗಳು ಸಹ ಕನ್ನಡಕ್ಕೆ ಡಬ್ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ಕನ್ನಡ ನಟರನ್ನು ಹಾಕಿಕೊಂಡರೆ ಇನ್ನೂ ಹೆಚ್ಚು ಕನ್ನಡ ಪ್ರೇಕ್ಷಕರನ್ನು ಸೆಳೆಯಬಹುದು ಎಂಬುದು ತೆಲುಗು ನಟರ, ನಿರ್ದೇಶಕರ ಚಿಂತನೆ. ಹೀಗಾಗಿ ತಮ್ಮ ಚಿತ್ರಗಳಲ್ಲಿ ಕನ್ನಡ ನಟನಿಗೆ ವಿಶೇಷ ಸ್ಥಾನ ನೀಡಲು ತೆಲುಗು ಸಿನಿಮಾ ಮಂದಿ ತುದಿಗಾಲಿನಲ್ಲಿ ನಿಂತಿದ್ದಾರೆ.
ಇನ್ನು ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ಉಪೇಂದ್ರ ನಟಿಸುತ್ತಿರುವ ಕುರಿತು ಮಾಹಿತಿಯಷ್ಟೇ ಲಭ್ಯವಾಗಿದ್ದು, ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ.