ಕಿಚ್ಚ ಸುದೀಪ್ ಅವರು ಕಳೆದ ಎರಡು ದಿನಗಳಿಂದ ಬಿಜೆಪಿ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇಂದು ಹಾವೇರಿ ಜಿಲ್ಲೆಯ ಹಿರೇಕೆರೂರು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದರು. ನಾಳೆ ಗದಗ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೇ ಚಿತ್ರದುರ್ಗ, ದಾವಣೆಗೆರೆ ಸೇರಿದಂತೆ ಐದು ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗಿದ್ದರು. ನಾಳೆ ಗದಗ (Gadag) ಜಿಲ್ಲೆಯ ಹಲವು ಕ್ಷೇತ್ರಗಳ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ನೆಚ್ಚಿನ ನಟನನ್ನು ಬರಮಾಡಿಕೊಳ್ಳಲು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ, ಕಿಚ್ಚನ ಅಭಿಮಾನಿಗಳು ಕೂಡ ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಗದಗ ತುಂಬಾ ಕಿಚ್ಚನ ಕಟೌಟ್ ಮತ್ತು ಬ್ಯಾನರ್ಸ್ ರಾರಾಜಿಸುತ್ತಿವೆ. ಗದಗ ಬಿಜೆಪಿ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ಅವರ ಪ್ರಚಾರ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಮೇಲಿನ ಪ್ರೀತಿಯಿಂದಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿರುವ ಸುದೀಪ್ (Sudeep), ಇನ್ನೂ ಐದಾರು ದಿನಗಳ ಕಾಲ ಇದೇ ಕೆಲಸದಲ್ಲಿ ನಿರತರಾಗಲಿದ್ದಾರೆ.