‘ಆದಿಪುರುಷ್’ ನಲ್ಲಿ ‘ಬಾಹುಬಲಿ’ ಕನ್ನಡದ ‘ಬಚ್ಚನ್’ ನಟನೆ ..!
ಮುಂಬೈ : ಬಾಹುಬಲಿ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಆದಿಪುರುಷ್ ಸಿನಿಮಾ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಈ ನಡುವೆ ಆದಿಪುರುಷ್ ಬಗ್ಗೆ ಮತ್ತೊಂದು ಬಿಗ್ ಅಪ್ ಡೇಟ್ ಸಿಕ್ಕಿದ್ದು, ಕನ್ನಡ ಸಿನಿಪ್ರಿಯರು ಎಕ್ಸ್ಟೈಟ್ ಆಗುವಂತೆ ಮಾಡಿದೆ. ಹೌದು ಈ ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಲಿದ್ದಾರೆ ಎನ್ನಲಾಗ್ತಿದೆ.
ಅಂದ್ಹಾಗೆ ಸುದೀಪ್ ಈಗಾಗಲೇ ಬಾಲಿವುಡ್ ಟಾಲಿವುಡ್ , ಕಾಲಿವುಡ್ ಎಲ್ಲಾ ಭಾಷೆಗಳಲ್ಲೂ ಮಿಂಚಿದ್ದು, ಎಲ್ಲಾ ಭಾಷೆಗಳಲ್ಲೂ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಲ್ಲದೇ ಈ ಮೊದಲು ಪ್ರಭಾಸ್ ನಟನೆಯ ಹೈ ವೋಲ್ಟೇಜ್ ಸಿನಿಮಾ ಬಾಹುಬಲಿಯಲ್ಲಿ ವಿಶೇಷ ಪಾತ್ರದಲ್ಲಿ ಕಿಚ್ಚ ಗಮನ ಸೆಳೆದಿದ್ದಾರೆ. ಇದೀಗ ಮತ್ತೊಮ್ಮೆ ಪ್ರಭಾಸ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಬಾಲಿವುಡ್ ನಿರ್ದೇಶಕ ಓಂ ರಾವತ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಪ್ರಭಾಸ್ ಮತ್ತು ಸೈಫ್ ಅಲಿ ಖಾನ್, ಕೃತಿ ಸನೂನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಸಹ ಕಾಸ್ಟ್ ಅಂಡ್ ಕ್ರೀವ್ ಸೇರಲಿದ್ದಾರೆ ಎನ್ನಲಾಗ್ತಿದೆ. ಇನ್ನೂ ಇತ್ತೀಚೆಗಷ್ಟೇ ತಮಿಳಿನ ಸ್ಟಾರ್ ನಿರ್ದೇಶಕ ಶಂಕರ್ ಹಾಗೂ ರಾಮ್ ಚರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯ 3ಡಿ ಚಿತ್ರದಲ್ಲಿಯೂ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ಧಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಈ ಸುದ್ದಿ ಹರಿದಾಡ್ತಿದೆ.
ಒಂದು ವೇಳೆ ಕಿಚ್ಚ ಸುದೀಪ್ ಅವರು ಈ ಸಿನಿಮಾದಲ್ಲಿ ನಟಿಸುವುದು ಖಚಿತವಾದ್ರೆ ಯಾವ ಪಾತ್ರದಲ್ಲಿ ಕಿಚ್ಚ ಮಿಂಚಲಿದ್ಧಾರೆ ಅನ್ನೋ ಪ್ರಶ್ನೆಯೂ ಕಾಡುತ್ತಿದೆ. ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಅವರು ರಾವಣನ ಕಿರಿಯ ಸಹೋದರ ವಿಭೀಷಣನ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗಿದೆ.