ಇಂದಿನಿಂದ ಕಿಚ್ಚನ ಮೇನಿಯಾ – ವಿಶ್ವಾದ್ಯಂತ ವಿಕ್ರಾಂತ್ ರೋಣ ರಿಲೀಸ್…..
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಇಂದು ವಿಶ್ವಾದ್ಯಂತ ತೆರೆಕಾಣುತ್ತಿದ್ದೆ. ಸಿನಿಮಾ ನೋಡಿ ಹೊರಬಂದ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇಂದು ಮುಂಜಾನೆಯಿಂದಲೇ ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಜಮಾಯಿಸಿದ್ದಾರೆ.
ಕರ್ನಾಟಕದ 325 ಸಿಂಗಲ್ ಸ್ಕ್ರೀನ್‍ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ತೆರೆಕಂಡಿದ್ದು, ಮೊದಲ ದಿನ ರಾಜ್ಯದಲ್ಲಿ ಬರೋಬ್ಬರಿ 2,500 ಶೋಗಳು ನಡೆಯಲಿದೆ. ಸುಮಾರು 900 ಸ್ಕ್ರೀನ್‍ಗಳಲ್ಲಿ 3ಡಿ ಹಾಗೂ 1,600 ಸ್ಕ್ರೀನ್‍ನಲ್ಲಿ 2ಡಿ ವರ್ಷನ್ ಬಿಡುಗಡೆಯಾಗಿದೆ. ಬೆಂಗಳೂರಿನ 40 ಮಲ್ಟಿಪ್ಲೆಕ್ಸ್‌ನಲ್ಲಿ 800 ಶೋ ಒಟ್ಟು 70 ಸಿಂಗಲ್ ಸ್ಕ್ರೀನ್‍ನಲ್ಲಿ 400 ಶೋ ಇದೆ.
ಬಹುದಿನಗಳ ಬಳಿಕ ಕನ್ನಡದಲ್ಲಿ 3ಡಿ ಚಿತ್ರ ಬರುತ್ತಿದೆ. ಬೃಹತ್ ಸೆಟ್ಗಳನ್ನು ನಿರ್ಮಿಸಿ ಚಿತ್ರೀಕರಣ ಮಾಡಲಾದ ದೃಶ್ಯಗಳು 3ಡಿಯಲ್ಲಿ ಕಣ್ಮನ ಸೆಳೆಯುವಂತಿವೆ. ಸಿನಿಮಾ ನೋಡಿದ ಅಭಿಮಾನಿಗಳಿ ಟ್ವೀಟರ್ ಅಲ್ಲಿ ಅಭಿಪ್ರಾಯ ಮಂಡಿಸಿದ್ದು, ಸಿನಿಮಾ ಬ್ಲಾಕ್ ಬ್ಲಸ್ಟರ್ ಆಗುವ ಮುನ್ಸೂಚನೆ ನೀಡಿದೆ.
ಕನ್ನಡ, ಇಂಗ್ಲೀಷ್ ಸೇರಿದಂತೆ 6 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಭಾರತ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಕ್ರಾಂತ್ ರೋಣ ಅಬ್ಬರಿಸುತ್ತಿದ್ದಾನೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕೆಲ್ವಿನ್ ಫರ್ನಾಂಡಿಸ್, ರವಿಶಂಕರ್ ಗೌಡ ಸೇರೆದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ.