ವಿಜಯೇಂದ್ರ ವಿರುದ್ಧದ ಕಿಕ್ ಬ್ಯಾಗ್ ಆರೋಪ ಆಧಾರರಹಿತ : ಬಿಎಸ್ ವೈ
ಬೆಂಗಳೂರು : ವಿಜಯೇಂದ್ರ ವಿರುದ್ಧದ ಕಿಕ್ ಬ್ಯಾಗ್ ಆರೋಪ ಕೂಡ ಆಧಾರರಹಿತ, ನೀರಾವರಿ ಇಲಾಖೆಯಲ್ಲಿನ ಟೆಂಡರ್ ಆರೋಪದ ಬಗ್ಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡುತ್ತಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಹೆಚ್ ವಿಶ್ವನಾಥ್ ಕಿಕ್ ಬ್ಯಾಗ್ ಆರೋಪದ ಬಗ್ಗೆ ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ ಬಿ.ಎಸ್.ವೈ, ಹೆಚ್ ವಿಶ್ವನಾಥ್ ಆರೋಪಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ.
ಅವರ ಬಗ್ಗೆ ಹೈಕಮಾಂಡ್ ತೀರ್ಮಾನಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ. ವಿಜಯೇಂದ್ರ ವಿರುದ್ಧದ ಕಿಕ್ ಬ್ಯಾಗ್ ಆರೋಪ ಕೂಡ ಆಧಾರರಹಿತ, ನೀರಾವರಿ ಇಲಾಖೆಯಲ್ಲಿನ ಟೆಂಡರ್ ಆರೋಪದ ಬಗ್ಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡುತ್ತಾರೆ ಎಂದರು.
ಇದೇ ವೇಳೆ ನಾಯಕತ್ವ ಗೊಂದಲ ಬಗ್ಗೆ ಮಾತನಾಡಿ, ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತಿದ್ದೇವೆ.
ಪಕ್ಷದಲ್ಲಿ ಯಾರೋ ಒಂದಿಬ್ಬರು ವಿರೋಧ ಮಾತನಾಡಬಹುದು, ಅಂತವರು ತಮ್ಮ ಸಮಸ್ಯೆಗಳನ್ನು ಬಂದು ಮಾತನಾಡಿ ಬಗೆಹರಿಸಿಕೊಳ್ಳಲಿ, ನಾಯಕರ ಮಧ್ಯೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.









