ಬೆಂಗಳೂರು: ದೇವರ ಉತ್ಸವದಲ್ಲಿ ಡಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಮೈ ತಾಕಿದೆ ಎಂಬ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬೈಕ್ ಸರ್ವೀಸ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯೋಗೀಶ್(23) ಕೊಲೆಯಾಗಿದ್ದ ದುರ್ದೈವಿ. ಸದ್ಯ ಘಟನೆಗೆ ಸಂಬಂಧಿಸಿದಂತೆ ಚೇತನ್, ರಂಗ, ಪವನ್ ನನ್ನು ಬಂಧಿಸಲಾಗಿದೆ.
ಮೂರು ದಿನಗಳ ಹಿಂದೆ ನಡೆದಿದ್ದ ದೇವರ ಉತ್ಸವದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಯೋಗೀಶ್ ಮೈ ತಾಕಿಸಿದ್ದಾನೆ. ಈ ವಿಚಾರಕ್ಕೆ ಯೋಗೀಶ್ ಮತ್ತು ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಇದು ವಿಕೋಪಕ್ಕೆ ತೆರಳಿ ಮೂವರು ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಹಳೆಯ ದ್ವೇಷಕ್ಕೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ