ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC) ಬಸ್ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿವೆ. ಭಾನುವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಿಲ್ಲರ್ ಬಿಎಂಟಿಸಿಗೆ ಇಬ್ಬರು ಬಲಿಯಾಗಿದ್ದಾರೆ.
ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವೀಣಾ ಬಸ್ ಗೆ ಬಲಿಯಾದ ಮಹಿಳೆ ಎನ್ನಲಾಗಿದೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಸಾಯಿ ಗಾರ್ಮೆಂಟ್ಸ್ ಹತ್ತಿರ ಈ ಘಟನೆ ನಡೆದಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ವಿಜಯನಗರ (Vijayanagara) ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಿಎಂಟಿಸಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕುಮಾರ್ (45) ಸಾವನ್ನಪ್ಪಿದ ಬೈಕ್ ಸವಾರ. ಗೋವಿಂದರಾಜನಗರ ಬೈಟು ಕಾಫಿ ಮುಂಭಾಗದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ವಿಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.






