ರಾಜ್ಯದಲ್ಲಿ ಕೊರೊನಾ ರುದ್ರತಾಂಡವ : ಒಂದೇ ದಿನ 3693 ಮಂದಿಗೆ ಸೋಂಕು, 115 ಜನ ಬಲಿ
ಬೆಂಗಳೂರು : ಕರ್ನಾಟಕದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ಸೋಂಕಿನ ರುದ್ರತಾಂಡವ ಮುಂದವರಿದಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 3693 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಕಿಲ್ಲರ್ ಕೊರೊನಾಗೆ 115 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 1147 ಜನ ಕೊನೆಯುಸಿರೆಳೆದಿದ್ದಾರೆ.
ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು, 2,208 ಜನರಿಗೆ ಸೋಂಕು ತಗುಲಿದೆ.ಜೊತೆಗೆ ಇಂದು ಒಂದೇ ದಿನ ಕೊರೊನಾ ಸೋಂಕಿಗೆ 75 ಜನ ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರು ಒಂದರಲ್ಲೆ 582 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಇನ್ನು ರಾಜ್ಯದಲ್ಲಿನ ಒಟ್ಟು ಕೊರೊನಾ ಸೋಂಕಿತರ ಪೈಕಿ ಈವರೆಗೆ 20,757 ಮಂದಿ ಹೆಮ್ಮಾರಿ ವೈರಸ್ ನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 33,205 ಸಕ್ರಿಯ ಪ್ರಕರಣಗಳಿದ್ದು, ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.








