ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಜೈಲಿಗೆ ಕೊರೊನಾ ಆತಂಕ ಶುರುವಾಗಿದೆ.
ಮೈಸೂರಿನ ವಿಜಯನಗರದಲ್ಲಿ ನಡೆದಿದ್ದ ಕೊಲೆ ಮಾಡಿ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಿಜಯನಗರ ಪೊಲೀಸರಿಗೆ ಆರೋಪಿ ಶರಣಾಗಿದ್ದ. ಬಳಿಕ ಆತನನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಮೂರು ದಿನಗಳ ಹಿಂದೆ ಆರೋಪಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಆರೋಪಿಗೆ ಕೊರೊನಾ ಇರುವುದು ದೃಢವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ
ಆತನ ಜೊತೆಗಿದ್ದ 20 ಖೈದಿಗಳನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ ಎನ್ನಲಾಗಿದೆ.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








