ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ (Jammu Kashmir) ಗಡಿ ನಿಯಂತ್ರಣ ರೇಖೆ (LOC)ಯಲ್ಲಿ ಪೊಲೀಸರು ಹಾಗೂ ಸೇನೆ ನಡೆಸಿದ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಐವರು ಲಷ್ಕರ್ ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ನಲ್ಲಿ ಎನ್ಕೌಂಟರ್ ನಡೆದಿದೆ. ಆರಂಭದಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದರು. ನಂತರದ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಭಯೋತ್ಪಾದಕರು ಲಷ್ಕರ್-ಎ-ತೊಯ್ಬಾ (Lashkar-e-Toiba)ಗೆ ಸೇರಿದವರು. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.