ರಾಯ್ಪುರ್: ಛತ್ತೀಸ್ ಗಢದ (Chhattisgarh) ಬಸ್ತಾರ್ ನ ಕಂಕೇರ್ – ನಾರಾಯಣಪುರ ಹತ್ತಿರದ ಅಬುಜ್ಮಧ್ನ ದಟ್ಟ ಅರಣ್ಯದಲ್ಲಿ ಭದ್ರತಾ ಪಡೆಗಳ (Security Force) ಎನ್ ಕೌಂಟರ್ ಗೆ (Encounter) ಐವರು ನಕ್ಸಲರು ಹತ್ಯೆಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಯೋಧರಿಗೂ ಗಾಯಗಳಾಗಿವೆ ಎನ್ನಲಾಗಿದೆ. ಶನಿವಾರ ಬೆಳಗ್ಗೆ ನಕ್ಸಲರನ್ನು ಹೊಡಿದುರುಳಿಸಲಾಗಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಾಚರಣೆಯಲ್ಲಿ ಗಾಯಗೊಂಡ ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ರಾಯ್ಪುರಕ್ಕೆ ವಿಮಾನದಲ್ಲಿ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ.








