ರಾಯಚೂರು: ಮನಬಂದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ನೀಲವಂಜಿ ಗ್ರಾಮದ ಹತ್ತಿರ ನಡೆದಿದೆ. ಮಾಕಂಡಯ್ಯ(28) ಕೊಲೆಯಾದಿರುವ ದುರ್ದೈವ ಯುವಕ ಎನ್ನಲಾಗಿದೆ. ದುಷ್ಕರ್ಮಿಗಳು ಕಾಲು ಮುರಿದು ಮನಬಂದಂತೆ ಕೊಚ್ಚಿ ದುಷ್ಕರ್ಮಿಗಳಿಂದ ಕೊಲೆ ಮಾಡಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಕೆ ಕೈಗೊಂಡಿದ್ದಾರೆ.








