ಇಸ್ಲಾಮಾಬಾದ್: ಭಾರತದ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆಯಾಗಿದೆ.
ಪಾಕ್ ನ (Pakistan) ಖೈಬರ್ ಪಖ್ತುಂಖ್ವಾದಲ್ಲಿ ಅಪರಿಚಿತರು ಲಷ್ಕರ್-ಎ-ತೊಯ್ಬಾ ಕಮಾಂಡರ್ (Lashkar e Taiba Terrorist) ಅಕ್ರಮ್ ಘಾಜಿಯ ಎಂಬಾತನನ್ನು ಹತ್ಯೆ ಮಾಡಲಾಗಿದೆ.
ಪಾಕಿಸ್ತಾನದ ಅಪರಿಚಿತ ವ್ಯಕ್ತಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ಹೇಳಿವೆ. ಅಕ್ರಮ್ ಖಾನ್ ಅಲಿಯಾಸ್ ಘಾಜಿ ಲಷ್ಕರ್ ಗೆ ಉನ್ನತ ನೇಮಕಾತಿದಾರರಲ್ಲಿ ಒಬ್ಬನಾಗಿದ್ದ. ಎರಡು ವರ್ಷಗಳಲ್ಲಿ ಕಾಶ್ಮೀರ ಕಣಿವೆಗೆ ಅನೇಕ ಬ್ಯಾಚ್ಗಳಲ್ಲಿ ನುಸುಳಿದ ಹಲವಾರು ಭಯೋತ್ಪಾದಕರ ಜವಾಬ್ದಾರಿಯನ್ನು ಹೊತ್ತಿದ್ದ.
ಘಾಜಿ ಹತ್ಯೆಯಲ್ಲಿ ವಿವಿಧ ಭಯೋತ್ಪಾದಕ ಗುಂಪುಗಳು ಸೇರಿದಂತೆ ಸ್ಥಳೀಯ ವಿರೋಧಿಗಳ ಪಾತ್ರ ಇರಬಹುದು ಎನ್ನಲಾಗಿದೆ. ಈತ ಭಾರತದ ವಿರುದ್ಧ ದ್ವೇಷ ತುಂಬಿದ ಭಾಷಣಗಳಿಗೆ ಹೆಸರುವಾಸಿಯಾಗಿದ್ದ.