KING Kohli ಆರ್ಭಟ.. ಭಾರತಕ್ಕೆ ರಣ ರೋಚಕ ಗೆಲುವು
ಟಿ 20 ವಿಶ್ವಕಪ್ ನ ಇಂಡೋ – ಪಾಕ್ ನಡುವಿನ ಬ್ಲಾಕ್ ಬ್ಲಸ್ಟರ್ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ 82 ರನ್ ಗಳಿಸಿ ಅಜೇಯರಾಗುಳಿದರು,.
ಭಾರತ ಇನ್ನಿಂಗ್ಸ್ ನ ಎರಡನೇ ಓವರ್ ನಲ್ಲಿ ರಾಹುಲ್ 4 ರನ್ ಗಳಿಸಿ ನಾಸೀಮ್ ಶಾಗೆ ವಿಕೆಟ್ ಒಪ್ಪಿಸಿದರು. ನಂತರದ ಓವರ್ ನಲ್ಲಿ ರೋಹಿತ್ ಶರ್ಮಾ ನಾಲ್ಕು ರನ್ ಗಳಿಸಿ ಹಾರಿಸ್ ರೌಫ್ ಗೆ ವಿಕೆಟ್ ನೀಡಿದರು. ಆರನೇ ಓವರ್ ನಲ್ಲಿ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದ ಸೂರ್ಯ ಕುಮಾರ್ ನಂತರದ ಎಸೆತದಲ್ಲಿ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಇದಾದ ಬಳಿಕ ಅಕ್ಷರ್ ಪಟೇಲ್ ಕೂಡ ಬಂದಷ್ಟೇ ವೇಗದಲ್ಲಿ ಮೈದಾನದಿಂದ ಹೊರ ನಡೆದರು.
ಈ ಹಂತದಲ್ಲಿ ಹಾರ್ದಿಕ್ ಪಾಂಡ್ಯ – ವಿರಾಟ್ ಕೊಹ್ಲಿ ತಂಡಕ್ಕೆ ಆಸರೆಯಾದರು. ಈ ಜೋಡಿ ಶತಕದ ಜೊತೆಯಾಟವನ್ನು ಆಡಿ ಭಾತರವನ್ನು ಗೆಲುವಿನ ದಡ ಸೇರಿತು. ಹಾರ್ದಿ್ಕ ಪಾಂಡ್ಯ 37 ಎಸೆತಗಳಲ್ಲಿ 40 ರನ್ ಗಳಿಸಿ ಕೊನೆಯ ಓವರ್ ನಲ್ಲಿ ಔಟ್ ಆದರು.
ಇದಕ್ಕು ಮುನ್ನ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ, ನಿಗದಿತ 20 ಓವರ್ ಗಳಲ್ಲಿ ಪಾಕಿಸ್ತಾನ ತಂಡ 8 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು.
ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಯುವ ಬೌಲರ್ ಅರ್ಷ್ ದೀಪ್ ಸಿಂಗ್ ಆರಂಭದಲ್ಲಿಯೇ ಪಾಕಿಸ್ತಾನಕ್ಕೆ ಆಘಾತ ನೀಡಿದರು. ಆರಂಭಿಕರನ್ನು ಅರ್ಷ್ ದೀಪ್ ಬೇಗ ಪೆವಿಲಿಯನ್ ಗೆ ಕಳುಹಿಸಿದರು.
ಈ ಹಂತದಲ್ಲಿ ಶಾನ್ ಮಸೂದ್ – ಇಫ್ಟಿಕರ್ ಅಹ್ಮದ್ ಜೋಡಿ ಭಾರತೀಯ ಬೌಲರ್ ಗಳನ್ನು ಕಾಡಿದರು. ಇಫ್ಟಿಕರ್ 34 ಎಸೆತಗಳಲ್ಲಿ 51 ರನ್ ಗಳಿಸಿದರು. ಮಸೂದ್ 42 ಎಸೆತಗಳಲ್ಲಿ 52 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊನೆಯಲ್ಲಿ ಶಾಹೀನ್ ಅಫ್ರಿದಿ 16 ರನ್ ಗಳಿಸಿದರು. ಆ ಮೂಲಕ ನಿಗದಿತ 20 ಓವರ್ ಗಳಲ್ಲಿ ಪಾಕಿಸ್ತಾನ ತಂಡ 8 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿತು.