kiran maheshwari
ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಬಲಿ : ಕಿರಣ್ ಮಹೇಶ್ವರಿ ನಿಧನ
ರಾಜಸ್ಥಾನ : ಕೊರೊನಾ ಹಾವಳಿಗೆ ಜನಪ್ರತಿನಿಧಿಗಳು ಬಲಿಯಾಗ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೋರ್ವ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಗುರ್ ಗಾಂವ್ ಅವರು ಇಂದು ವಿಧಿವಶರಾಗಿದ್ದಾರೆ. 59 ವರ್ಷದ ಕಿರಣ್ ಅವರು ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರಿಗೆ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಕಿರಣ್ ಮಹೇಶ್ವರಿ ಅವರ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, “ ರಾಜಸ್ಥಾನ ಸರ್ಕಾರದಲ್ಲಿ ಸಂಸದೆ, ಶಾಸಕಿ ಹಾಗೂ ಕ್ಯಾಬಿನೆಟ್ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ, ಬಡವರು, ದೀನ-ನಿರ್ಗತಿಕರ ಸಬಲೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿರುವ ಕಿರಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಊರ್ಮಿಳಾ ಶಿವಸೇನೆ ಸೇರೋದು ಪಕ್ಕಾ : ಎಂಎಲ್ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಊರ್ಮಿಳಾ ಹೆಸರು..!
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಸಂತಾಪ ಸೂಚಿಸಿದ್ದಾರೆ. “ಕಿರಣ್ ಮಹೇಶ್ವರಿ ಅವರು ತಮ್ಮ ಜೀವನವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದರು. ಅವರ ಸಾವು ನನಗೆ ವೈಯಕ್ತಿಕವಾಗಿ ನಷ್ಟವನ್ನು ಉಂಟು ಮಾಡಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ” ಎಂದು ಟ್ವೀಟ್ ಮಾಡಿದ್ದಾರೆ.
ನವೆಂಬರ್ ಮೊದಲ ವಾರದಲ್ಲಿ ಕೊರೊನಾ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ , ಸುಮಾರು 25 ದಿನಗಳ ಕಾಲ ಚಿಕಿತ್ಸೆಗೆ ಒಳಗಾಗಿದ್ದರು. ರಾಜಸ್ಥಾನದ ಉದಯಪುರ ಕ್ಷೇತ್ರದಿಂದ 2006 ರಿಂದ 2009 ರವರೆಗೆ 14ನೇ ಲೋಕಸಭೆ ಸದಸ್ಯರಾಗಿದ್ದರು.
kiran maheshwari
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








