ಹುಬ್ಬಳ್ಳಿ: ನಗರದಲ್ಲಿ ಅಂಜಲಿ ಕೊಲೆ (Anjali Murder) ಮಾಡಿದ್ದ ಕಿರಾತಕ ಮತ್ತೋರ್ವ ಮಹಿಳೆಯ ಕೊಲೆ ಮಾಡಲು ಯತ್ನಿಸಿ ಪೊಲೀಸರ ಅತಿಥಿಯಾಗಿದ್ದಾನೆ.
ಅಂಜಲಿ ಕೊಲೆ ಮಾಡಿದ್ದ ಕಿರಾತಕ ವಿಶ್ವನನ್ನು ಈಗ ಪೊಲೀಸರು ಬಂಧಿಸಿದ್ದಾರೆ. ಅಂಜಲಿಯನ್ನು ಹತ್ಯೆ ಮಾಡಿದ ನಂತರ ವಿಶ್ವ ಪರಾರಿಯಾಗಿ ದಾವಣಗೆರೆ (Davanagere) ರೈಲಿನಲ್ಲಿ ಪ್ರಯಾಣ ನಡೆಸಿದ್ದ. ಈ ಸಂದರ್ಭದಲ್ಲಿ ರೈಲಿನಲ್ಲಿ ಮಹಿಳೆಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಸಿಟ್ಟಾಗಿ ಚಾಕು ಹಾಕಲು ಯತ್ನಿಸಿದ್ದಾನೆ.
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆಗ ತಪ್ಪಿಸಿಕೊಳ್ಳುವುದಕ್ಕಾಗಿ ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿ ಕೊಲೆ ಮಾಡಿರುವ ಆರೋಪಿ ಎನ್ನುವುದು ಗೊತ್ತಾಗಿದೆ. ಸದ್ಯ ಈತ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.