ಕಿಸಾನ್ `ಕೈ’ ಪ್ರೊಟೆಸ್ಟ್ : ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ರಾಜಭವನ್ ಚಲೋ ರ್ಯಾಲಿ ಹಮ್ಮಿಕೊಂಡಿದ್ದು, ಸದ್ಯ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ರೈತರು ಮೊದಲು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಫ್ರೀಡಂ ಪಾಕ್ ವರೆಗೆ ಮೆರವಣಿಗೆ ಹೊರಟರು.
ಅಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ಬಳಿಕ ಅಲ್ಲಿಂದ ರಾಜಭವನ ಮುತ್ತಿಗೆಗೆ ತೆರಳಿದ್ರು.
ಈ ವೇಳೆ ರಸ್ತೆ ಮಧ್ಯೆದಲ್ಲಿ ಕಾಂಗ್ರೆಸ್ ಮುಖಂಡರು, ರೈತರನ್ನು ಪೊಲೀಸರು ತಡೆದಿದ್ದಾರೆ.
ನಗರ ಮಹಾರಾಣಿ ಕಾಲೇಜಿನ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಬಳಿಕ, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel