kitturu utsava 2022 ಕಿತ್ತೂರು ಉತ್ಸವ- 2022
ರಾಣಿ ಚನ್ನಮ್ಮ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಜಾನಪದ ಕಲಾ ತಂಡಗಳಿಂದ ಕಲಾ ಪ್ರದರ್ಶನ
ಎರಡು ದಿನಗಳ ಕಾಲ ನಡೆಯುವ ಕಿತ್ತೂರು ಉತ್ಸವ
ರಾಜ್ಯ ಸರ್ಕಾರದಿಂದ ಕಿತ್ತೂರು ಉತ್ಸವ ಆಯೋಜನೆ
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಎರಡು ದಿನಗಳ ಕಿತ್ತೂರು ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ.
ಉತ್ಸವ ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ಕಿತ್ತೂರು ಅಭಿವೃದ್ಧಿಗೆ 115 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಈಗಿರುವ ಐತಿಹಾಸಿಕ ಕೋಟೆ ಸುತ್ತ ಜಮೀನು ಸ್ವಾಧೀನಕ್ಕೆ ರೈತರ ಮನವೊಲಿಸುತ್ತೇವೆ.
ಅಲ್ಲದೆ ಕೋಟೆ ಪುನರ್ ಜೀರ್ಣೋದ್ಧಾರಕ್ಕೆ 27 ಕೋಟಿ ರುಪಾಯಿ ಅನುದಾನ ನೀಡುತ್ತೇವೆ.
ಕಿತ್ತೂರು ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮ ವಹಿಸಲಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಶಾಸಕ ಮಹಾಂತೇಶ್ ದೊಡ್ಡಗೌಡರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಿತ್ತೂರು ಮಠದ ಮಡಿವಾಳೇಶ್ವರ ಸ್ವಾಮಿಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಉತ್ಸವದಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡು, ಕಲಾ ಪ್ರದರ್ಶನ ನೀಡಿದವು.
ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಭಾರತೀಯ ಸೈನ್ಯದ ಯಾವುದಾದರೂ ಒಂದು ಪಡೆಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.








