ಕಿವೀಸ್ ವಿರುದ್ಧ ಫಸ್ಟ್ ಟೆಸ್ಟ್ : ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಕಾನ್ಪುರ : ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದಿದೆ. ಟೀಂ ಇಂಡಿಯಾದ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಕೋಚ್ ಆದ ಬಳಿಕ ಭಾಗವಹಿಸುತ್ತಿರುವ ಮೊದಲ ಟೆಸ್ಟ್ ಸರಣಿ ಇದಾಗಿದೆ. ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಯಂಗ್ ಇಂಡಿಯಾವನ್ನು ಅಜಿಂಕ್ಯ ರಹಾನೆ ಮತ್ತೊಮ್ಮೆ ಮುನ್ನಡೆಸುತ್ತಿದ್ದಾರೆ.
ಭಾರತದ ತಂಡ ಹೀಗಿದೆ
ಶುಭಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ(ನಾಯಕ), ವೃದ್ಧಿಮಾನ್ ಸಹಾ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್
ಇನ್ನು ಕಿವೀಸ್ ವಿರುದ್ಧದ ಟಿ 20ಸರಣಿಯನ್ನು ಗೆದ್ದಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನೂ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ಟೀಂ 20 ಸರಣಿಯಲ್ಲಾದ ಮುಖಭಂಗಕ್ಕೆ ಸೇಡು ತೀರಿಸಿಕೊಳ್ಳಲು ಕಿವೀಸ್ ಪಡೆ ಸಜ್ಜಾಗಿದೆ. ಹೀಗಾಗಿ ಟೆಸ್ಟ್ ಕ್ರಿಕೆಟ್ ನ ಮದಗಜಗಳು ಗುದ್ದಾಟ ಎಲ್ಲರ ಕುತೂಹಲ ಕೆರಳಿಸಿದೆ.