ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ, ಗೆಲುವಿನ ನಾಗಾಲೋಟ ಮುಂದುವರೆಸಿದೆ.
ಮೊದಲು ಬ್ಯಾಟ್ ಮಾಡಿದ್ದ ಲಕ್ನೋ 161 ರನ್ ಗಳಿಸಿತ್ತು. ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡ 15.4 ಓವರ್ ಗಳಲ್ಲಿಯೇ ಗುರಿ ಮುಟ್ಟಿದೆ. ಪಿಲ್ ಸಾಲ್ಟ್ 47 ಎಸೆತಗಳಿಗೆ 89 ಹಾಗೂ ಶ್ರೇಯಸ್ ಅಯ್ಯರ್ 38 ಎಸೆತಗಳಿಗೆ 38 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮೊದಲು ಟಾಸ್ ಗೆದ್ದಿದ್ದ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 161 ರನ್ ಗಳಿಸಲು ಮಾತ್ರ ಶಕ್ತವಾಯಿತು. ನಿಕೋಲಸ್ ಪುರನ್ 32 ಎಸೆತಗಳಲ್ಲಿ ಎರಡು 4 ಹಾಗೂ ನಾಲ್ಕು 6 ನೆರವಿನಿಂದ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಕೆಎಲ್ ರಾಹುಲ್ 27 ಎಸೆತಗಳಲ್ಲಿ 39 ರನ್ ಗಳಿಸಿದರು. ಇನ್ನುಳಿದಂತೆ ಯಾವುದೇ ಆಟಗಾರರು ಪರಿಣಾಮಕಾರಿಯಾಗದ ಹಿನ್ನೆಲೆಯಲ್ಲಿ ತಂಡ ಕಡಿಮೆ ಸ್ಕೋರ್ ಗಳಿಸುವಂತಾಯಿತು.