KKR vs DC | ಕೆಕೆಆರ್ vs ಡಿಸಿ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್
ಇಂಡಿಯಲ್ ಪ್ರಿಮಿಯರ್ ಲೀಗ್ನ ಸೂಪರ್ ಸಂಡೆಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ತಂಡ ಬಲಿಷ್ಠವಾಗಿದೆ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಅದ್ಭುತ ಆಟಗಾರರಿದ್ದಾರೆ. ಮುಖ್ಯವಾಗಿ ಆಲ್ ರೌಂಡರ್ ಗಳು ತಂಡದ ಪ್ರಮುಖ ಬ್ರಹ್ಮಾಸ್ತ್ರವಾಗಿದ್ದಾರೆ.
ಆ್ಯಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಸುನೀಲ್ ನರೈನ್ ತಂಡದ ಕೀ ಪ್ಲೇಯರ್ ಗಳಾಗಿದ್ದಾರೆ. ಇವರ ಜೊತೆಗೆ ಬೌಲಿಂಗ್ ನಲ್ಲಿ ಉಮೇಶ್ ಯಾದವ್ ಮ್ಯಾಚ್ ವಿನ್ನರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಪೇಪರ್ ಮೇಲೆ ಬಲಿಷ್ಠವಾಗಿ ಕಂಡರೂ ತಾಕತ್ತಿಗೆ ತಕ್ಕ ಆಟವನ್ನಾಡುತ್ತಿಲ್ಲ. ಟೂರ್ನಿಯಲ್ಲಿ ಈ ವರೆಗೂ ಮೂರು ಪಂದ್ಯಗಳನ್ನಾಡಿರುವ ಡೆಲ್ಲಿ ತಂಡ, ಎರಡು ಗೆಲುವು ದಾಖಲಿಸಿ ಏಳನೇ ಸ್ಥಾನದಲ್ಲಿದ್ದಾರೆ.
ಡೇವಿಡ್ ವಾರ್ನರ್, ಪೃಥ್ವಿ ಷಾ, ರೋಮ್ವನ್ ಪೊವೆಲ್, ರಿಷಬ್ ಪಂತ್, ಸರ್ಫರಾಜ್ ಖಾನ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೀಪ್ಲೇಯರ್ ಗಳಾಗಿದ್ದಾರೆ.
ತಂಡಗಳ ಹೆಡ್ ಟು ಹೆಡ್ ರೆಕಾರ್ಡ್
ಇಂಡಿಯನ್ ಪ್ರಿಮಿಯರ್ ಲೀಗ್ ನ ಇತಿಹಾಸದಲ್ಲಿ ಕೊ್ಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈವರೆಗೂ 29 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 16 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ ಗೆದ್ದಿದೆ.
ಕಳೆದ ಐದು ಪಂದ್ಯಗಳಲ್ಲಿ ಕೆಕೆಆರ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ವರ್ಷದ ಐಪಿಎಲ್ ನಲ್ಲಿ ಮೂರು ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪೈಕಿ ಎರಡು ಪಂದ್ಯಗಳಲ್ಲಿ ಕೆಕೆಆರ್ ಗೆದ್ದಿದೆ. ಒಂದರಲ್ಲಿ ಡೆಲ್ಲಿ ಗೆದ್ದಿದೆ.
KKR vs DC Head-to-Head Records