KKR vs DC | ಪಂತ್ ವರ್ಸಸ್ ಅಯ್ಯರ್… ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ
ಬ್ರೆಬೋರ್ನ್ ಮೈದಾನ ಇಂದು ಮಹಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಬಿಗ್ ಹಿಟ್ಟರ್ ಗಳೇ ಇರುವ ತಂಡಗಳು ಬ್ರೆಬೋರ್ನ್ ಮೈದಾನದಲ್ಲಿ ಗುದ್ದಾಟ ನಡೆಸಲಿವೆ.
15 ನೇ ಸೀಸನ್ ನ 19ನೇ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸವಾಲ್ ಹಾಕಲಿದೆ.
ಈ ಬಾರಿಯ ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಧ್ಭುತ ಫಾರ್ಮ್ ನಲ್ಲಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಉತ್ತಮ ರನ್ ರೇಟ್ ನೊಂದಿಗೆ ಮೊದಲ ಸ್ಥಾನದಲ್ಲಿದೆ. ಮುಖ್ಯವಾಗಿ ತಂಡಕ್ಕೆ ಪ್ಯಾಟ್ ಕಮ್ಮಿನ್್ ಆಗಮನ ಬೂಸ್ಟ್ ನೀಡಿದೆ.
ಇಂದಿನ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಾವುದೇ ಬದಲಾವಣೆಗಳಿಲ್ಲದೇ ಕಣಕ್ಕಿಳಿಯಲಿದೆ.
ಕೆಕೆಆರ್ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ಸಿ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆ), ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ರಸಿಖ್ ದಾರ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ. ಈ ಆವೃತ್ತಿಯಲ್ಲಿ ಡೆಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ತಂಡಕ್ಕೆ ದೇವಿಡ್ ವಾರ್ನರ್ ಸೇರಿಕೊಂಡರೂ ಇನ್ನೂ ಮಿಂಚಿಲ್ಲ. ಇತ್ತ ಅರ್ನಿಚ್ ನರ್ಟೆಜ್ ಕೂಡ ಫಾರ್ಮ್ ನಲ್ಲಿಲ್ಲ.
ಡೆಲ್ಲಿ ತಂಡದ ಪ್ಲೇಯಿಂಗ್ ಇಲೆವೆನ್ ಹೀಗಿದೆ.
ಡೆಲ್ಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ರಿಷಬ್ ಪಂತ್ (c & wk), ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್