KKR-vs-GT-Match | ಟಾಸ್ ಗೆದ್ದ ಗುಜರಾತ್.. ಕೈ ಕೊಟ್ಟ ಶುಭ್ ಮನ್
ಡಿ ವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಹಾರ್ದಿಕ್ ಆಗಮನದಿಂದಾಗಿ ವಿಜಯ್ ಶಂಕರ್ ಸ್ಥಾನ ಕಳೆದುಕೊಂಡಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಟೀಂ ಸೌತಿ, ರಿಂಕು ಸಿಂಗ್ ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆದಿದ್ದಾರೆ.
ತಂಡಗಳು ಹೀಗಿವೆ
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ, ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ಸಿ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ಸಿ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ರಿಂಕು ಸಿಂಗ್, ಆಂಡ್ರೆ ರಸೆಲ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಸದ್ಯ ಬ್ಯಾಟಿಂಗ್ ಆರಂಭಿಸಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಮತ್ತೆ ಆರಂಭಿಕ ಆಘಾತ ಎದುರಾಗಿದೆ. ಶುಭ್ ಮನ್ ಗಿಲ್ 7 ರನ್ ಗಳಿಗೆ ಪೆವಿಲಿಯನ್ ಸೇರಿಕೊಂಡಿದ್ದಾರೆ.