KKR-vs-GT-Match | ಹಾರ್ದಿಕ್ ಅರ್ಧಶತಕ.. ಕೆಕೆಆರ್ ಗೆ 157 ರನ್ ಗುರಿ
ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಜವಾಬ್ದಾರಿಯುತ ಅರ್ಧ ಶತಕ.. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬಿಗಿ ಬೌಲಿಂಗ್ ದಾಳಿ.. ಕೆಕೆಆರ್ ತಂಡಕ್ಕೆ ಪಂದ್ಯ ಗೆಲ್ಲಲು 157 ರನ್ ಗಳ ಗುರಿ
ಡಿ ವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿದೆ.
ಗುಜರಾತ್ ಟೈಟಾನ್ಸ್ ಪರ ಆರಂಭಿಕರಾಗಿ ಕ್ರೀಸ್ ಗೆ ಬಂದ ವೃದ್ಧಿಮಾನ್ ಸಹಾ ಮತ್ತು ಶುಭ್ ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ವಿಫಲರಾದ್ರು. ಗಿಲ್ ಕೇವಲ 7 ರನ್ ಗಳಿಸಿ ಸೌತಿಗೆ ವಿಕೆಟ್ ಒಪ್ಪಿಸಿದರು.
ಈ ವೇಳೆ ಸಹಾ ಜೊತೆಗೂಡಿದ ಹಾರ್ದಿಕ್ ಪಾಂಡ್ಯ, 75 ರನ್ ಗಳ ಜೊತೆಯಾಟವಾಡಿದರು. ಸಹಾ 25 ಎಸೆತಗಳಲ್ಲಿ 25 ರನ್ ಗಳಿಸಿ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ವೆಂಕಟೇಶ್ ಅಯ್ಯರ್ ಗೆ ಕ್ಯಾಚ್ ನೀಡಿದರು. ನಂತರ ಡೇವಿಡ್ ಮಿಲ್ಲರ್ ಮತ್ತುನ ಹಾರ್ದಿಕ್ ಪಾಂಡ್ಯ ತಂಡದ ಮೊತ್ತವನ್ನು ನೂರರ ಗಡಿದಾಟಿಸಿದರು. ಈ ಜೋಡಿ 50 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಆದ್ರೆ ನಿರ್ಣಾಯಕ ಹಂತದಲ್ಲಿ ಡೀವಿಡ್ ಮಿಲ್ಲರ್ 27 ರನ್ ಗಳಿಸಿ ಶಿವಂ ಮಾವಿಗೆ ವಿಕೆಟ್ ನೀಡಿದರು.
ಇದೇ ಸಂದರ್ಭದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅರ್ಧ ಶತಕ ಸಿಡಿಸಿ ಮಿಂಚಿದರು. 49 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ 67 ರನ್ ಗಳಿಸಿ ಹಾರ್ದಿಕ್ ಔಟ್ ಆದರು. ರಾಹುಲ್ ತೆವಾಟಿಯಾ 17 ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿದೆ.
ಕೆಕೆಆರ್ ಪರ ರಸೆಲ್ ನಾಲ್ಕು ವಿಕೆಟ್ ಪಡೆದರೇ ಟೀಮ್ ಸೌತಿ ಮೂರು ವಿಕೆಟ್, ಉಮೇಶ್ ಯಾದವ್, ಶಿವಂ ಮಾವಿ ತಲಾ ಒಂದು ವಿಕೆಟ್ ಪಡೆದರು.
ತಂಡಗಳು ಹೀಗಿವೆ
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ, ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ಸಿ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ಸಿ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ರಿಂಕು ಸಿಂಗ್, ಆಂಡ್ರೆ ರಸೆಲ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ KKR-vs-GT-Match Hardik half-century 157 runs for KKR