ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR vs RR Match | ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆ ರಾಯಲ್ ಗೆಲುವು…

Mahesh M Dhandu by Mahesh M Dhandu
May 3, 2022
in Newsbeat, Sports, ಕ್ರಿಕೆಟ್
kkr-vs-rr-match-Rinku Singh leads Kolkata Knight Riders to seven-wicket win

kkr-vs-rr-match-Rinku Singh leads Kolkata Knight Riders to seven-wicket win

Share on FacebookShare on TwitterShare on WhatsappShare on Telegram

KKR vs RR Match | ರಾಜಸ್ಥಾನ್ ವಿರುದ್ಧ ಕೆಕೆಆರ್ ಗೆ ರಾಯಲ್ ಗೆಲುವು…

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವು ಸಾಧಿಸಿದೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಆ ಮೂಲಕ ಪ್ಲೇ ಆಫ್ಸ್ ರೇಸ್ ನಲ್ಲಿ ನಾವೂ ಇದ್ದೇವೆ ಅಂತಾ ಇನ್ನುಳಿದ ತಂಡಗಳಿಗೆ ಎಚ್ಚರಿಕೆಯ ಸಂದೇಶಯನ್ನು ರವಾನಿಸಿದೆ.

ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 152 ರನ್ಗಳಿಸಿತು.

ಈ ಸವಾಲು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ 19.1 ಓವರ್ನಲ್ಲಿ 158 ರನ್ಗಳಿಸುವ ಮೂಲಕ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಜಯದೊಂದಿಗೆ ಕೆಕೆಆರ್, ಅಂಕಪಟ್ಟಿಯಲ್ಲಿ 8 ಪಾಯಿಂಟ್ಸ್ ಪಡೆದು 7ನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ 12 ಪಾಯಿಂಟ್ಸ್ನಿಂದ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ನೀಡಿದ 153 ರನ್ಗಳ ಟಾರ್ಗೆಟ್ ಎದುರಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ಗೆ ಎಂದಿನಂತೆ ಉತ್ತಮ ಆರಂಭ ಸಿಗಲಿಲ್ಲ.

ಇನ್ನಿಂಗ್ಸ್ ಆರಂಭಿಸಿದ ಆರೋನ್ ಪಿಂಚ್ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮತ್ತೊಬ್ಬ ಆರಂಭಿಕ ಬಾಬಾ ಇಂದ್ರಜಿತ್ 15 ರನ್ ಗಳಿಸಿ ನಿರ್ಗಮಿಸಿದರು.

ಈ ವೇಳೆ ತಂಡಕ್ಕೆ ಆಸರೆಯಾದ ಶ್ರೇಯಸ್ ಅಯ್ಯರ್ 34 ರನ್ ಗಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಿತೀಶ್ ರಾಣಾ ಅಜೇಯ 48 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ ಹಾಗೂ ನಿತೀಶ್ ರಾಣಾ, 3ನೇ ವಿಕೆಟ್ಗೆ 60 ರನ್ಗಳ ಜೊತೆಯಾಟದ ಕಾಣಿಕೆ ನೀಡಿದರು.

ನಿರ್ಣಾಯಕ ಹಂತದಲ್ಲಿ ಶ್ರೇಯಸ್ ಅಯ್ಯರ್ ವಿಕೆಟ್ ಕಳೆದುಕೊಂಡ ಕೆಕೆಆರ್ ಸ್ವಲ್ಪಮಟ್ಟಿನ ಆತಂಕಕ್ಕೆ ಸಿಲುಕಿತು.

kkr-vs-rr-match-Rinku Singh leads Kolkata Knight Riders to seven-wicket win  saaksha tv
kkr-vs-rr-match-Rinku Singh leads Kolkata Knight Riders to seven-wicket win saaksha tv

ಆದರೆ ಈ ವೇಳೆ ನಿತೀಶ್ ರಾಣ ಜೊತೆ ಸೇರಿದ ರಿಂಕು ಸಿಂಗ್ 23 ಎಸೆತಗಳಲ್ಲಿ 42 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ರಿಂಕು ಸಿಂಗ್ 23 ಎಸೆತಗಳಲ್ಲಿ ಆರು ಬೌಂಡರಿ, ಒಂದು ಸಿಕ್ಸರ್ ನೆರವಿನಿಂದ ಅಜೇಯ 42 ರನ್ ಗಳಿಸಿದರು. ಅಲ್ಲದೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನ ಕೂಡ ಪಡೆದುಕೊಂಡರು.

ರಾಯಲ್ಸ್ ಪರ ಟ್ರೆಂಟ್ ಬೋಲ್ಟ್ ಪ್ರಸಿದ್ಧ್ ಕೃಷ್ಣ, ಕುಲ್ ದೀಪ್ ಸೇನ್ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನಾ ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 2  ಹಾಗೂ ಜಾಸ್ ಬಟ್ಲರ್ 22 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ನಂತರ ಕಣಕ್ಕಿಳಿದ ಕರುಣ್ ನಾಯರ್ 13 ರನ್ ಗಳಿಸಿ ಸಿಕ್ಕ ಅವಕಾಶವನ್ನು ಕೈ ಚೆಲ್ಲಿದರು.  ಆದ್ರೆ ಎಚ್ಚರಿಕೆಯಿಂದ ಆಡಿದ ನಾಯಕ ಸಂಜೂ ಸ್ಯಾಮ್ಸನ್ 54 ರನ್ ಬಾರಿಸಿ ತಂಡಕ್ಕೆ ಆಸರೆಯಾದರು.

ಉಳಿದಂತೆ 4ನೇ ಕ್ರಮಾಂಕದಲ್ಲಿ ಬಂದ ರಿಯಾನ್ ಪರಾಗ್ 19 ರನ್, ಶಿಮ್ರಾನ್ ಹೆಟ್ಮಾಯೆರ್ 27 ರನ್ ಗಳಿಸಿದರು.

ಕೆಕೆಆರ್ ಪರ ಟಿಮ್ ಸೌಥಿ ಎರಡು ವಿಕೆಟ್ ಪಡೆದ್ರೆ, ಉಮೇಶ್ ಯಾದವ್, ಅನುಕೂಲ್ ರಾಯ್, ಶಿವಂ ಮಾವಿ ತಲಾ ಒಂದು ವಿಕೆಟ್ ಪಡೆದರು.

kkr-vs-rr-match-Rinku Singh leads Kolkata Knight Riders to seven-wicket win

Tags: #Saaksha TVCricketipl 2022kkr-vs-rr-matchShreyas Iyer.
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram