KKR vs SRH ಮ್ಯಾಚ್ Probable XI
ಇಂಡಿಯನ್ ಪ್ರಿಮಿಯರ್ ಲೀಗ್ ಇಂದಿನ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿರುವ ಕೊಲ್ಕತ್ತಾ ನೈಟ್ ರೈಸರ್ಸ್ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಗೆಲುವಿನ ಟ್ರ್ಯಾಕ್ ಗೆ ಮರಳಲು ಪ್ಲಾನ್ ಮಾಡಿಕೊಂಡಿದೆ. ಇತ್ತ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವಿನ ಅಭಿಯಾನವನ್ನು ಮುಂದುವರೆಸಲು ಕಸರತ್ತು ನಡೆಸಿದೆ.
ಇಂದಿನ ಪಂದ್ಯ ಮುಂಬೈನ ಡಿ.ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇಂಡಿಯನ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ಈ ವರೆಗೂ 21 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ರಾಬಲ್ಯ ಸಾಧಿಸಿದೆ. ಕೆಕೆಆರ್ ತಂಡ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ 7 ಬಾರಿ ಮಾತ್ರ ಕೆಕೆಆರ್ ತಂಡವನ್ನು ಮಣಿಸಿದೆ.
ಇನ್ನು ಕಳೆದ ಐದು ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 1 ಪಂದ್ಯದಲ್ಲಿ ಗೆಲುವು ಸಾಧಿಸಿದೆ.
ಇನ್ನು ಇಂದಿನ ಪಂದ್ಯದಲ್ಲಿ ಗೆಲುವಿಗಾಗಿ ಎರಡು ತಂಡಗಳು ಗುದ್ದಾಡಲಿದ್ದು, ಎರಡೂ ತಂಡಗಳಲ್ಲಿ ಕೆಲವೊಂದು ಬದಲಾವಣೆಗಳು ಖಚಿತ ಎಂದು ಅಂದಾಜಿಸಲಾಗುತ್ತಿದೆ.
ಸನ್ ರೈಸರ್ಸ್ ತಂಡಕ್ಕೆಕಾಂಬಿನೇಷನ್ ತಲೆನೋವು ಶುರುವಾಗಿದೆ. ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಈ ಪಂದ್ಯಕ್ಕೆ ಅಲಭ್ಯ. ಹೀಗಾಗಿ ಶ್ರೇಯಸ್ ಗೋಪಾಲ್ ಅವಕಾಶ ಪಡೆಯಬಹುದು.
ಸನ್ ರೈಸರ್ಸ್ ತಂಡದ ಲೈಕ್ಲಿ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಸನ್ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಸಿ), ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆ), ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಇತ್ತ ಕೆಕೆಆರ್ ತಂಡದಲ್ಲಿ ವೆಂಕಟೇಶ್ ಅಯ್ಯರ್ ಮತ್ತು ಅಜಿಂಕ್ಯಾ ರಹಾನೆ ಒಟ್ಟಾಗಿ ಮಿಂಚಿಲ್ಲ. ಹೀಗಾಗಿ ರಹಾನೆ ಬದಲು ಶೆಲ್ಡನ್ ಜಾಕ್ಸನ್ ಆಡಬಹದು. ಅಯ್ಯರ್ ಜೊತೆ ಸ್ಯಾಮ್ ಬಿಲ್ಲಿಂಗ್ಸ್ ಅಥವಾ ಸುನೀಲ್ ನರೈನ್ ಇನ್ನಿಂಗ್ಸ್ ಆರಂಭಿಸಿದರೂ ಅಚ್ಚರಿ ಇಲ್ಲ. ಜಾಕ್ಸನ್ 5ನೇ ಕ್ರಮಾಂಕದಲ್ಲಿ ಆಡುವ ತಾಕತ್ತು ಹೊಂದಿದ್ದಾರೆ. ಇಲ್ಲವಾದರೆ ಇನ್ನಿಂಗ್ಸ್ ಆರಂಭಿಸಲೂ ಬಹುದು.
ಕೆಕೆಆರ್ ತಂಡದ ಲೈಕ್ಲಿ ಪ್ಲೇಯಿಂಗ್ ಇಲೆವೆನ್ ಹೀಗಿದೆ
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ಸಿ), ನಿತೀಶ್ ರಾಣಾ, ಆಂಡ್ರೆ ರಸೆಲ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆ), ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ದಾರ್, ವರುಣ್ ಚಕ್ರವರ್ತಿ
kkr-vs-srh-match-probable-xi